Breaking News

ಮಹತ್ವದ ಆಯುಷ್ಮಾನ್ ಭಾರತ್ ಯೋಜನೆಗೆ ಪ್ರಧಾನಿಯಿಂದ ಇಂದು ಚಾಲನೆ..

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ವಿಶ್ವದ ಅತೀ ದೊಡ್ಡ ಸರ್ಕಾರಿ ಅನುದಾನಿತ ಆರೋಗ್ಯ ಕಾರ್ಯಕ್ರಮವಾದ ಆಯುಷ್ಮಾನ್​ ಭಾರತ್​ ಯೋಜನೆಗೆ ಜಾರ್ಖಂಡ್​​ನ ರಾಂಚಿಯಲ್ಲಿ ಚಾಲನೆ ನೀಡಲಿದ್ದಾರೆ. ಈ ಯೋಜನೆಯಿಂದ ಸುಮಾರು 50 ಕೋಟಿ ಭಾರತೀಯರು ಪ್ರಯೋಜನ ಪಡೆಯಲಿದ್ದಾರೆ. ಆರ್ಥಿಕವಾಗಿ ಹಿಂದುಳಿದ 10 ಕೋಟಿ ಕುಟುಂಬಗಳನ್ನು ತಲುಪಬೇಕು ಎನ್ನುವ ಗುರಿಯನ್ನು ಹೊಂದಿದೆ. ಈ ಯೋಜನೆಯನ್ನು ಪ್ರಧಾನ ಮಂತ್ರಿ ಜನ್​ ಆರೋಗ್ಯ ಅಭಿಯಾನ ಎಂದು ಸಹ ಕರೆಯಲಾಗುತ್ತದೆ. ಪ್ರಧಾನಿಯವರು ಇಂದು ಯೋಜನೆಗೆ ಚಾಲನೆ ನೀಡಿದರು ಸಹ ಅದು ಅಧಿಕೃತವಾಗಿ ಸೆಪ್ಟೆಂಬರ್​ 25 ಪಂಡಿತ್​ ದೀನ್​ ದಯಾಳ್​ ಉಪಾಧ್ಯಾಯ ಅವರ ಜನ್ಮದಿನದಂದು ಜಾರಿಗೆ ಬರಲಿದೆ. ಈ ಯೋಜನೆಯಡಿ 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ವಿಮೆ ಸಿಗಲಿದೆ. ಸರ್ಕಾರ ಒಂದು ಬಡ ಕುಟುಂಬಕ್ಕೆ ವಾರ್ಷಿಕ 5 ಲಕ್ಷವರೆಗೆ ಆಸ್ಪತ್ರೆ ವೆಚ್ಚ ಭರಿಸುತ್ತದೆ.
Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *