ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮಹತ್ವದ ಶಾಸಕಾಂಗ ಸಮಿತಿ ಸಭೆ ನಡೆಯಲಿದೆ.
ನಗರದ ಮೌಂಟ್ ಕಾರ್ಮೆಲ್ ಕಾಲೇಜು ಸಮೀಪ ಇರುವ ಶಾಂಗ್ರಿಲಾ ಹೋಟೆಲ್‍ನಲ್ಲಿ ಸೆಪ್ಟೆಂಬರ್ 25ರಂದು ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು, ವಿಧಾನಪರಿಷತ್ ಚುನಾವಣೆ, ವಿಧಾನ ಪರಿಷತ್ನ ಆರು ಸ್ಥಾನಗಳಿಗೆ ಚುನಾವಣೆ, ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳಿಗೆ ನೇಮಕ, ಲೋಕಸಭಾ ಚುನಾವಣೆ ಸೇರಿದಂತೆ ಇತರ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.
ಈಗಾಗಲೇ ವಿಧಾನಪರಿಷತ್ ಚುನಾವಣೆಗೆ ಅಭರ್ಥಿಗಳನ್ನು ಕಾಂಗ್ರೆಸ್ ಪರಕ್ತಿಸಿದೆ. ಆದರೆ ಬಿಜೆಪಿ ಈ ಚುನಾವಣೆಗೆ ಯಾವುದೇ ಅಭ್ಯರ್ಥಿಯನ್ನೂ ಕಣಕ್ಕಿಳಿಸದೆ ಹಿಂದೆ ಸರಿದಿದೆ. ಹೀಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಯಾವುದೇ ತೊಂದರೆಯಿಲ್ಲದೆ ಗೆಲುವು ದೊರೆಯಲಿದೆ. ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು 118 ಸ್ಥಾನಗಳ ಅಗತ್ಯ ಇತ್ತು. ಬಿಜೆಪಿ ಬಳಿ ಕೇವಲ 104 ಸದಸ್ಯರ ಬಲ ಇರುವುದರಿಂದ ಸ್ಪರ್ಧಿಸದಿರಲು ನಿರ್ಧರಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





