Breaking News

2019 ನೇ ಸಾಲಿನ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಪ್ರಧಾನಿ ಮೋದಿ ಹೆಸರು ಸೂಚನೆ

ಚೆನ್ನೈ: ಬಿಜೆಪಿ ನಾಯಕಿ ತಮಿಳಿಸೈ ಸೌಂದರರಾಜನ್ ಅವರು 2019 ನೇ ಸಾಲಿನ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಹೆಸರನ್ನು ಸೂಚಿಸಿದ್ದಾರೆ.
ವಿಶ್ವದ ಅತ್ಯಂತ ದೊಡ್ಡ ಆರೋಗ್ಯ ರಕ್ಷಣೆ ಕಾರ್ಯಕ್ರಮ ಆಯುಷ್ಮಾನ್ ಭಾರತ’ವನ್ನು ಆರಂಭಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರ ಹೆಸರನ್ನು 2019 ನೇ ಸಾಲಿನ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಸೂಚಿಸಿರುವುದಾಗಿ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿರುವ  ತಮಿಳಿಸೈ ಸೌಂದರರಾಜನ್ ನಿನ್ನೆ ತಿಳಿಸಿದ್ದಾರೆ.
ತಮಿಳಿಸೈ ಸೌಂದರರಾಜನ್ ಪತಿ ಡಾ. ಪಿ. ಸೌಂದರರಾಜನ್ ಅವರು ಖಾಸಗಿ ವಿವಿಯಲ್ಲಿ ಪ್ರೊಫೆಸರ್ ಆಗಿದ್ದು, ಅವರೂ ನೊಬೆಲ್ ಪುರಸ್ಕಾರಕ್ಕಾಗಿ ಮೋದಿಯವರ ಹೆಸರನ್ನು ಸೂಚಿಸಿದ್ದಾರೆ ಎಂದು ತಮಿಳಿಸೈ ತಿಳಿಸಿರುವುದಾಗಿ ಅವರ ಕಚೇರಿಯ ಹೇಳಿಕೆ ತಿಳಿಸಿದೆ.
2019 ನೇ ಸಾಲಿನ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಹೆಸರನ್ನು ಸೂಚಿಸಲು ಜನವರಿ 31, 2019 ಕೊನೆ ದಿನವಾಗಿದ್ದು, ಸೆಪ್ಟೆಂಬರ್ ನಲ್ಲಿ ನಾಮಕರಣ ಪ್ರಕ್ರಿಯೆ ಆರಂಭಗೊಳ್ಳುತ್ತದೆ.
Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *