Breaking News

ಆಧಾರ್ ಸಿಂಧುತ್ವದ ಭವಿಷ್ಯ ಇಂದು ನಿರ್ಧಾರ!

ನವದೆಹಲಿ: ಆಧಾರ್‌ ಕಾರ್ಡ್‌ ಖಡ್ಡಾಯವಾಗೊಳಿಸಿದ್ದ ಆದೇಶದ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್‌ ಇಂದು ಮಹತ್ವದ ತೀರ್ಪನ್ನು ಪ್ರಕಟಿಸಲಿದ್ದು, ಆಧಾರ್ ಸಿಂಧುತ್ವದ ಭವಿಷ್ಯ ಇಂದು ನಿರ್ಧಾರವಾಗಲಿದೆ. ವಿವಿಧ ಸಮಾಜ ಕಲ್ಯಾಣ ಯೋಜನೆಗಳು, ಬ್ಯಾಂಕ್‌ ಖಾತೆಗಳು ಮತ್ತು ಮೊಬೈಲ್‌ ಫೋನ್ ಗೆ ಆಧಾರ್‌ ಸಂಖ್ಯೆ ಜೋಡಿಸುವುದು ಅಗತ್ಯ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಕೇಂದ್ರದ ಈ ಯೋಜನೆಯ ಭವಿಷ್ಯ ಸುಪ್ರೀಂ ಕೋರ್ಟ್‌ ತೀರ್ಪಿನ ಮೇಲೆ ನಿಂತಿದೆ. 
ಆಧಾರ್‌ ಯೋಜನೆಯ ಸಿಂಧುತ್ವದ ಬಗ್ಗೆ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ನೇತೃತ್ವದ ನ್ಯಾ. ಎ.ಕೆ. ಸಿಕ್ರಿ, ನ್ಯಾ. ಎ.ಎಂ. ಖನ್ವಿಲ್ಕರ್, ನ್ಯಾ. ಡಿ.ವೈ. ಚಂದ್ರಚೂಡ್ ಮತ್ತು ನ್ಯಾ. ಅಶೋಕ್ ಭೂಷಣ್ ಇರುವ ಐವರು ನ್ಯಾಯಮೂರ್ತಿಗಳ ಪೀಠ ಬುಧವಾರ ಅಂತಿಮ ತೀರ್ಪು ನೀಡಲಿದ್ದಾರೆ. 
ಆಧಾರ್‌ ಸಿಂಧುತ್ವ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಎಸ್‌.ಪುಟ್ಟಸ್ವಾಮಿ ಸೇರಿದಂತೆ 24 ಮಂದಿ ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಸಂವಿಧಾನ ಪೀಠವು ಆಧಾರ್‌ ಪ್ರಕರಣದಲ್ಲಿ ನಾಲ್ಕು ತಿಂಗಳುಗಳ ಕಾಲ ಇಯರಿಂಗ್ ನಡೆದಿದೆ. ಸುದೀರ್ಘ ಅವಧಿಯವರೆಗೆ ವಿಚಾರಣೆ ನಡೆಸಿದ ಬಳಿಕ ಮೇ ತಿಂಗಳಿನಲ್ಲಿ ತೀರ್ಪು ಕಾಯ್ದಿರಿಸಿತ್ತು. ಇದೀಗ ಇಂದು ಈ ಪ್ರಕರಣದ ಅಂತಿಮ ತೀರ್ಪು ಹೊರ ಬೀಳಲಿದೆ.
Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *