Breaking News

೧೩ ಜಾನುವಾರುಗಳು ಸುಟ್ಟು ಕರಕಲಾದವು, ಬೆಂಕಿಯ ಕೆನ್ನಾಲಿಗೆಗೆ ಕೊಟ್ಟಿಗೆ ಸಂಪೂರ್ಣ ಭಸ್ಮ..

ಆಂಕರ್- ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ
ಕೊಟ್ಟಿಗೆಯಲ್ಲಿ ಕಟ್ಟಿದ 13 ಜಾನುವಾರುಗಳ ಸಜೀವ ದಹನವಾಗಿರುವ ಘಟನೆ ಕಲಘಟಗಿ ತಾಲೂಕಿನ ಗಳಗಿ ಹುಲಕೊಪ್ಪ ಗ್ರಾಮದಲ್ಲಿ ನಡೆದಿದೆ.‌
ಅಡಿವಯ್ಯ ಹಿರೇಮಠ್ ಅವರಿಗೆ ಸೇರಿದ ದನದ ಕೊಟ್ಟಿಗೆಯಲ್ಲಿ ಈ ಅವಘಡ ಸಂಭವಿಸಿದ್ದು, ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆಕಸ್ಮಿಕ ಬೆಂಕಿಗೆ ಜಿವನಾಧಾರವಾಗಿದ್ದ 13  ಜಾನುವಾರುಗಳು ಬೆಂಕಿಗೆ ಆಹುತಿಯಾಗಿವೆ.  
ಬೆಂಕಿಯ ಕೆನ್ನಾಲಿಗೆಗೆ ಕೊಟ್ಟಿಗೆ  ಸಂಪೂರ್ಣ ಸುಟ್ಟು ಕರಕಲಾಗಿದ್ದು, ಜಾನುವಾರುಗಳು ಸುಟ್ಟು ಹೋಗಿವೆ. ಅದೃಷ್ಟವಶಾತ್ ಕೊಟ್ಟಿಗೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಜೀವ ಹಾನಿ‌ ಸಂಭವಿಸಿಲ್ಲ.‌ ವಿಷಯ ತಿಳಿಯುತ್ತಿದಂತೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಈ ಸಂಬಂಧ  ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Share News

About Shaikh BIG TV NEWS, Hubballi

Check Also

ಡಿಸಿಸಿ ಅಧ್ಯಕ್ಷರ ಆಯ್ಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಎಚ್ಚರ! ತಪ್ಪು ನಿರ್ಧಾರ ಜಿಲ್ಲೆಯ ಕಾಂಗ್ರೆಸ್‌ಗೆ ಭಾರೀ ಹೊಡೆತ..?

ಫೋಟೋ ಪಾಲಿಟಿಕ್ಸ್‌ಗೆ ಮಣೆ ಬೇಡ, ಸಂಘಟನೆಯ ನಾಯಕರಿಗೆ ಮನ್ನಣೆ ಕೊಡಿ! ಡಿಸಿಸಿ ಆಯ್ಕೆ ಕಾಂಗ್ರೆಸ್‌ಗೆ ಅಗ್ನಿಪರೀಕ್ಷೆ… ಡಿಸಿಸಿ ಅಧ್ಯಕ್ಷ ಸ್ಥಾನ: …

Leave a Reply

Your email address will not be published. Required fields are marked *