ಮುಂಬೈ: ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ 2019ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂಬ ಊಹಾಪೋಹಗಳಿಗೆ ಪಕ್ಷದ ಅಧ್ಯಕ್ಷ ಇಂದು ತೆರೆ ಎಳೆದಿದ್ದಾರೆ. 2019ರ ಲೋಕ ಚುವಾವಣೆಗೆ ನ್ಯಾಷನಲ್ ಕಾಂಗ್ರೆಸ್ ಪಕ್ಷದ (ಎನ್ಪಿಸಿ) ಅಧ್ಯಕ್ಷ ಶರದ್ ಪವಾರ್ ಸ್ಪರ್ಧಿಸುವುದಿಲ್ಲ ಎಂದು ಪಕ್ಷದ ಮುಖ್ಯಸ್ಥರಾದ ಅಜಿತ್ ಪವಾರ್ ಹೇಳಿದ್ದಾರೆ. ಶನಿವಾರ ಮುಂಬೈನಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಪವಾರ್ ಎನ್ಸಿಪಿ ಅಧ್ಯಕ್ಷರು ಯಾವುದೇ ಲೋಕಸಭೆ ಕ್ಷೇತ್ರಕ್ಕೆ ಹೆಸರು ಸೂಚಿಸಲು ಇಷ್ಟವಿಲ್ಲ ಎಂದು ಮಾಹಿತಿ ನೀಡಿದ್ದಾರೆ.
78ವರ್ಷದ ಶರದ್ ಪವಾರ್ ಪಕ್ಷದ ಸರ್ವೋಚ್ಛ ನಾಯಕರಾಗಿ ಮುಂದುವರೆಯುತ್ತಾರೆ. ಲೋಕಸಭೆ ಚುನವಾಣೆಗೆ ಸ್ಪರ್ಧಿಸುವುದು ಬೇಡ ಎಂದು ಅವರು ಅಂದುಕೊಂಡಿದ್ದಾರೆ. ಪುಣೆಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಮಾತನಾಡಿದಾಗ ಕಾರ್ಯಕರ್ತರು ಸ್ಪರ್ಧೆ ಮಾಡುವಂತೆ ಮನವಿ ಮಾಡಿದ್ದರು. ಆದರೆ ಯಾವುದೇ ಕ್ಷೇತ್ರದಿಂದ ಸ್ಪರ್ಧೆಗೆ ತಮ್ಮ ಹೆಸರು ಪ್ರಸ್ತಾಪ ಮಾಡದಂತೆ ಸೂಚಿಸಿದರು ಎಂದು ಹೇಳಿದ್ದಾರೆ.
ಅಜಿತ್ ಪವಾರ್ರ ಮಗ ಪಾರ್ಥ ಪವಾರ್ಗೆ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡಬೇಕೋ ಇಲ್ಲವೋ ಎಂಬುದನ್ನು ಪಕ್ಷದ ಕಾರ್ಯಕರ್ತರ ಜತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಮುಂದಿನ ವರ್ಷ ನಡೆಯವ ಲೋಕಸಭೆ ಚುನಾವಣೆಗೆ ಎನ್ಸಿಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಸಭೆ ಕರೆಯಲಾಗುವುದು ಎಂದು ಹೇಳಿದ್ರು.
ಶಿವಸೇನೆ ದೋಸ್ತಿ ಹೆಚ್ಚು ಲಾಭ, ಸ್ವತಂತ್ರ ಬಿಜೆಪಿಗೆ ಲಾಭ..
ಮಹಾರಾಷ್ಟ್ರದಲ್ಲಿ 48 ಲೋಕಸಭಾ ಕ್ಷೇತ್ರಗಳಿದ್ದು, 50-50 ಅನುಪಾತದಲ್ಲಿ ಕಾಂಗ್ರೆಸ್ ಜತೆಗೆ ಸ್ಥಾನ ಹಂಚಿಕೆಗೆ ಎನ್ಸಿಪಿ ಮಾತುಕತೆ ನಡೆಸುತ್ತಿದೆ. ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಇಪ್ಪತ್ತೇಳು ಹಾಗೂ ಎನ್ಸಿಪಿ ಇಪ್ಪತ್ತೊಂದು ಸ್ಥಾನಗಳಲ್ಲಿ ಸ್ಫರ್ಧಿಸಿದ್ದವು. ಕಾಂಗ್ರೆಸ್ ಎನ್ಸಿಪಿ ಲೋಕಸಭೆ ಚುನಾವಣೆಗೆ ಪ್ರತ್ಯೇಕವಾಗಿ ತಯಾರಿ ನಡೆಸಲು ಆರಂಭಿಸಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





