Breaking News

ಕಾಂಗ್ರೆಸ್​​ ಐಟಿ ವಿಭಾಗದಲ್ಲಿ ಲೈಂಗಿಕ ಕಿರುಕುಳ ಆರೋಪ, ಚಾರ್ಜ್​​ಶೀಟ್​​ನಲ್ಲಿ ರಮ್ಯಾ ಹೆಸರು..!

ನವದೆಹಲಿ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಕಾಂಗ್ರೆಸ್​ ಐಟಿ ಸೆಲ್​​ ಮುಖ್ಯಸ್ಥೆ, ಮಾಜಿ ಸಂಸದೆ ರಮ್ಯಾ ಹೆಸರನ್ನೂ ಚಾರ್ಜ್ ಶೀಟ್​ನಲ್ಲಿ ಸೇರಿಸಲಾಗಿದೆ.
ಕಾಂಗ್ರೆಸ್ ಸಾಮಾಜಿಕ ಜಾಲತಾಣ ನಿರ್ವಹಣಾ ವಿಭಾಗದಲ್ಲಿ ಈ ಹಿಂದೆ ನಡೆದಿದೆ ಎನ್ನಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 31ರಂದು ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಚಿರಾಗ್ ಪಟ್ನಾಯಕ್​ ಎಂಬ ಆರೋಪಿಯನ್ನು ಬಂಧಿಸಿದ್ದರು. ​ತನಿಖೆಯ ನಂತರ ಇದೀಗ ಪೊಲೀಸರು ಪಟಿಯಾಲಾ ಕೋರ್ಟ್​ನಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಗಮನಾರ್ಹವೆಂದರೆ, ಪ್ರಕರಣ ಸಂಬಂಧ ದೋಷಾರೋಪ ಪಟ್ಟಿಯಲ್ಲಿ ರಮ್ಯಾ ಅವರ ಹೆಸರನ್ನೂ ಉಲ್ಲೇಖಿಸಲಾಗಿದೆ.
ತನಗಾದ ಲೈಂಗಿಕ ಕಿರುಕುಳದ ವಿರುದ್ಧ ಐಟಿ ಸೆಲ್​​ ಮುಖ್ಯಸ್ಥೆ ರಮ್ಯಾ, ಅಲಿಯಾಸ್​ ದಿವ್ಯಸ್ಪಂದನಗೆ ದೂರು ನೀಡಿದ್ದೆ. ಆದರೆ ಅವರು ಸ್ಪಂದಿಸಲಿಲ್ಲ. ತಮ್ಮ ದೂರನ್ನು ಕಿವಿಗೆ ಹಾಕಿಕೊಳ್ಳಲೂ ಇಲ್ಲ. ಬದಲಿಗೆ ನನ್ನ ಮೇಲೆಯೇ ಆರೋಪ ಮಾಡಲಾಯಿತು, ನನಗೆ ಮಾನಸಿಕ ಕಿರುಕುಳ ನೀಡಲಾಯಿತು ಎಂದು ಸಂತ್ರಸ್ತ ಯುವತಿಯು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ಹಾಗಾಗಿ, ರಮ್ಯಾ ಹೆಸರನ್ನು ದೋಷಾರೋಪ ಪಟ್ಟಿಯಲ್ಲಿ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಇದಾದ ಬಳಿಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್​ ಗಾಂಧಿ ಅವರಿಗೂ ಮತ್ತು ಎಐಸಿಸಿ​ಗೂ ದೂರು ನೀಡಿದ್ದೆ. ಆದರೆ ರಾಹುಲ್​ ಗಾಂಧಿ ಅವರಿಂದಲೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ದೂರುದಾರರು ಪೊಲೀಸರಿಗೆ ತಿಳಿಸಿದ್ದರು. ಇದೀಗ ಪಟಿಯಾಲಾ ಕೋರ್ಟ್​ ದೋಷಾರೋಪ ಪಟ್ಟಿಯನ್ನು ಅಂಗೀಕರಿಸಿದ್ದು, ಮುಂದಿನ ಫೆಬ್ರವರಿಯಿಂದ ಪ್ರಕರಣದ ವಿಚಾರಣೆ ಆರಂಭವಾಗಲಿದೆ ಎಂದು ತಿಳಿದು ಬಂದಿದೆ.
Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *