Breaking News

ಕುಪ್ವಾರದಲ್ಲಿ ಎನ್​ಕೌಂಟರ್​: ಇಬ್ಬರು ಉಗ್ರರ ಸೆರೆ..

ಜಮ್ಮು ಕಾಶ್ಮೀರದ ಕುಪ್ವಾರದಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಶರತ್​​ಗುಂಡ್​​ ಬಾಲಾದ ಬಳಿ ಎನ್​ಕೌಂಟರ್​ ನಡೆಯುತ್ತಿದ್ದು, ಇಬ್ಬರು ಅಥವಾ ಮೂವರು ಉಗ್ರರು ಸೆರೆಯಾಗಿದ್ದಾರೆಂದು ತಿಳಿದುಬಂದಿದೆ. ಉಗ್ರನಾಗಿ ಬದಲಾದ ಆಲಿಘಡ್​ ಮುಸ್ಲಿಂ ಯೂನಿವರ್ಸಿಟಿಯ ವಿದ್ಯಾರ್ಥಿ ಮನಾನ್ ವಾಣಿ ಕೂಡ ಸೆರೆಯಾಗಿರುವ ಉಗ್ರರಲ್ಲಿ ಒಬ್ಬನಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ. ಇನ್ನು ಈ ಪ್ರದೇಶದಲ್ಲಿ ಶಾಲಾ ಕಾಲೇಜುಗಳನ್ನ ಮುಚ್ಚಲಾಗಿದ್ದು, ಇಂಟರ್‌ನೆಟ್​​ ಸೇವೆ ಸ್ಥಗಿತಗೊಳಿಸಲಾಗಿದೆ. ಭದ್ರತಾ ಪಡೆಯ ಕಾರ್ಯಾಚರಣೆ ಮುಂದುವರೆದಿದೆ.
Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *