ಬೆಂಗಳೂರು: ಚಂದವನದಲ್ಲಿ ಬಿರುಗಾಳಿ ಎಬ್ಬಿಸಿರುವ ಮೀ ಟೂ ಅಭಿಯಾನ ಬಿಬಿಎಂಪಿಗೂ ಕಾಲಿಟ್ಟಿದೆ. ಕೆಲಸದ ಜಾಗದಲ್ಲಿ ನಡೆಯುವ ಲೈಂಗಿಕ ಕಿರುಕುಳ ಅನುಭವವನ್ನು ಪೌರಕಾರ್ಮಿಕರು ತೆರೆದಿಟ್ಟಿದ್ದಾರೆ. ಈ ದೌರ್ಜನ್ಯಕ್ಕೆ ಕೊನೆ ಯಾವಾಗ ಎಂದು ಅಳಲು ತೋಡಿಕೊಂಡಿದ್ದಾರೆ. ಹೆಸರು ಹೇಳಲು ಇಚ್ಛಿಸದ ವ್ಯಕ್ತಿಯೊಬ್ಬರು, ಪೌರಕಾರ್ಮಿಕರಾಗಿ ಕೆಲಸ ಮಾಡುವ ತನ್ನ ಅತ್ತೆಗೆ ಪಾಲಿಕೆ ಅಧಿಕಾರಿಗಳಿಂದ ಆಗುತ್ತಿರುವ ಲೈಂಗಿಕ ಕಿರುಕುಳದ ಬಗ್ಗೆ ಫೇಸ್ ಬುಕ್ನಲ್ಲಿ ಬರೆದುಕೊಂಡಿದ್ದಾರೆ.ಬಡವರು ಪೌರಕಾರ್ಮಿಕ ಕೆಲಸಕ್ಕಾಗಿ ಬರುತ್ತಾರೆ. ನೀಚ ಅಧಿಕಾರಿಗಳು ಅವರಿಗೆ ಲೈಂಗಿಕ ಕಿರುಕುಳ ನೀಡ್ತಾರೆ. ನನ್ನ ಅತ್ತೆಯನ್ನು ಕೂಡಾ ನೀಚ ಅಧಿಕಾರಿಗಳು ಕಾಮಾಲೆ ಕಣ್ಣಿಂದ ನೋಡುತ್ತಾರೆ. ಅನಕ್ಷರಸ್ಥರು ಎಂಬ ಕಾರಣಕ್ಕೆ ಅಧಿಕಾರಿಗಳು ಅವರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಅಧಿಕಾರಿಗಳು ಹೇಳಿದ ಹಾಗೆ ಕೇಳದಿದ್ದರೆ ಹಾಜರಾತಿ ಕಟ್ ಮಾಡುತ್ತಾರೆ. ಈ ಬಗ್ಗೆ ಒಂದು ಗಂಟೆಗಳ ಕಾಲ ನಮ್ಮ ಅತ್ತೆ ಕಣ್ಣೀರು ಹಾಕಿದ್ದಾರೆ. ಇವರ ಕಾಮಚೇಷ್ಟೆಗೆ ಬಿಬಿಎಂಪಿ ಯಾವಾಗ ಬ್ರೇಕ್ ಹಾಕುತ್ತೆ ಎಂದು ನೋವು ತೋಡಿಕೊಂಡು ಫೇಸ್ ಬುಕ್ ಪೋಸ್ಟ್ ಹಾಕಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





