Breaking News

ಕಾಂಗ್ರೆಸ್​​ ಅಭ್ಯರ್ಥಿಗಳ ಪರ ಸಿಎಂ ಕುಮಾರಸ್ವಾಮಿ…

ಬೆಂಗಳೂರು: ರಾಜ್ಯದಲ್ಲಿ 3 ಲೋಕಸಭಾ ಹಾಗೂ 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಪ್ರಚಾರ ಜೋರಾಗಿದೆ. ಆದ್ರೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ದೋಸ್ತಿ ಪಕ್ಷವಾದ ಕಾಂಗ್ರೆಸ್​​ನ ಅಭ್ಯರ್ಥಿಗಳ ಪರ ಮತಯಾಚನೆ ಮಾಡುವುದು ಸಂಶಯ ಎನ್ನಲಾಗ್ತಿದೆ. ಕುಮಾರಸ್ವಾಮಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮಾತ್ರ ಅಖಾಡಕ್ಕೆ ಇಳಿದಿದ್ದಾರೆ.ಮಂಡ್ಯ ಲೋಕಸಭಾ ಕ್ಷೇತ್ರದಲ್ಲೇ ಇವತ್ತು ಮತಯಾಚಿಸಲಿರುವ ಕುಮಾರಸ್ವಾಮಿ, ನಾಳೆಯಿಂದ ಅಕ್ಟೋಬರ್​ 31ರ ವರೆಗೂ ಶಿವಮೊಗ್ಗ ಉಪಸಮರದಲ್ಲಿ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ಕ್ಯಾಂಪೇನ್ ಮಾಡಲಿದ್ದಾರೆ.31 ರಂದು ಶಿವಮೊಗ್ಗ ಕ್ಷೇತ್ರದಲ್ಲಿ ಪ್ರಚಾರ ಮುಗಿಸಿದ ಬಳಿಕ, ಮೈಸೂರಿಗೆ ವಾಪಸ್ಸಾಗಲಿದ್ದಾರೆ. ನಂತರ ನವೆಂಬರ್ 1ರಂದು ರಾಮನಗರದಲ್ಲಿ ಪತ್ನಿ ಅನಿತಾ ಕುಮಾರಸ್ವಾಮಿ ಪರ ಮತಯಾಚಿಸಲಿದ್ದಾರೆ. ಅದೇ ದಿನ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತದೆ. ಹೀಗಾಗಿ ಕುಮಾರಸ್ವಾಮಿ ಕಾಂಗ್ರೆಸ್​ ಅಭ್ಯರ್ಥಿಗಳು ಸ್ಪರ್ಧಿಸೋ ಬಳ್ಳಾರಿ ಹಾಗೂ ಜಮಖಂಡಿಯಲ್ಲಿ ಪ್ರಚಾರ ನಡೆಸುವುದು ಡೌಟ್​ ಎನ್ನಲಾಗ್ತಿದೆ.

Share News

About Shaikh BIG TV NEWS, Hubballi

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *