Breaking News

1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ; ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು 2019ರ ಮಾರ್ಚ್ 1 ರಿಂದ 18 ರವರೆಗೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ಧರಿಸಿದೆ.ಮಾರ್ಚ್​ 1ರಂದು ಇತಿಹಾಸ, ಭೌತಶಾಸ್ತ್ರ, ಬೇಸಿಕ್​ ಮ್ಯಾಥ್ಸ್​, ಮಾರ್ಚ್​ 2ರಂದು ಮಾಹಿತಿ ತಂತ್ರಜ್ಞಾನ, ರೀಟೆಲ್, ಆಟೋಮೊಬೈಲ್, ಹೆಲ್ತ್​ಕೇರ್, ಬ್ಯೂಟಿ ಮತ್ತು ವೆಲ್​ನೆಸ್​, ಮಾರ್ಚ್​ 5ರಂದು ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್, ಮಾರ್ಚ್​ 6ರಂದು ತರ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ, ಗೃಹವಿಜ್ಞಾನ, ಮಾರ್ಚ್​ 7ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ ಗಣಿತ, ಮಾರ್ಚ್​ 8ರಂದು ಉರ್ದು, ಸಂಸ್ಕೃತ, ಮಾರ್ಚ್​ 9ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.ಮಾರ್ಚ್​ 11ರಂದು ವ್ಯವಹಾರ ಅಧ್ಯಯನ, ಸಮಾಜಶಾಸ್ತ್ರ, ರಸಾಯನ ಶಾಸ್ತ್ರ, ಮಾರ್ಚ್​ 12ರಂದು ಭೂಗೋಳಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಮಾರ್ಚ್​ 13ರಂದು ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ, ಮಾರ್ಚ್​ 14ರಂದು ಅರ್ಥಶಾಸ್ತ್ರ, ಜೀವಶಾಸ್ತ್ರ, ಮಾರ್ಚ್​ 15ರಂದು ಹಿಂದಿ, ಮಾರ್ಚ್ 16ರಂದು ಕನ್ನಡ, ಮಾರ್ಚ್​ 18ರಂದು ಹಿಂದಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿವೆ.ಇದು ಪರೀಕ್ಷೆಯ ಪ್ರಸ್ತಾವಿತ ವೇಳಾಪಟ್ಟಿಯಾಗಿದ್ದು, ವೇಳಾಪಟ್ಟಿ ಸಂಬಂಧ ಯಾವುದೇ ಆಕ್ಷೇಪಗಳಿದ್ದಲ್ಲಿ ಜಂಟಿ ನಿರ್ದೇಶಕರು (ಪರೀಕ್ಷೆ), ಪದವಿಪೂರ್ವ ಶಿಕ್ಷಣ ಇಲಾಖೆ, ಸಂಪಿಗೆ ರಸ್ತೆ, 18ನೇ ಅಡ್ಡ ರಸ್ತೆ, ಮಲ್ಲೇಶ್ವರ, ಬೆಂಗಳೂರು-12 ಈ ವಿಳಾಸಕ್ಕೆ ನವೆಂಬರ್ 30 ರೊಳಗೆ ಅರ್ಜಿ ಸಲ್ಲಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Share News

About Shaikh BIG TV NEWS, Hubballi

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *