Breaking News

ಮಹಿಳೆಯರಿಗೆ ಶಬರಿಮಲೆ ಪ್ರವೇಶ ನೀಡಬೇಕು: ರಾಹುಲ್​ ಗಾಂಧಿ,.

ಎಲ್ಲಾ ವಯೋಮಾನದ ಮಹಿಳೆಯರಿಗೂ ಶಬರಿಮಲೆ ದೇವಸ್ಥಾನಕ್ಕೆ ಪ್ರವೇಶಿಸಲು ಅವಕಾಶ ದೊರೆಯಬೇಕು ಅಂತಾ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ರಾಹುಲ್‌, ಕೇರಳ ಕಾಂಗ್ರೆಸ್​ ಘಟಕದ ನಿಲುವಿಗೆ ವಿರುದ್ಧವಾದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದ್ರೆ, ಭಾವನಾತ್ಮಕ ವಿಷಯದಲ್ಲಿ ತನ್ನ ಅಭಿಪ್ರಾಯವು ಪಕ್ಷದ ಧೋರಣೆಗಿಂತ ಭಿನ್ನವಾಗಿರುವುದಾಗಿ ಸ್ವತಃ ಒಪ್ಪಿಕೊಂಡಿದ್ದಾರೆ. ಅಷ್ಟೇ ಅಲ್ಲ, ಶಬರಿಮಲೆ ವಿವಾದಕ್ಕೆ ಸಂಬಂಧಿಸಿ, ಮಹಿಳೆಯರು ಮತ್ತು ಪುರುಷರು ಸಮಾನರು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಎಲ್ಲಾ ಮಹಿಳೆಯರಿಗೂ ದೇವಸ್ಥಾನ ಪ್ರವೇಶಕ್ಕೆ ಅನುಮತಿ ದೊರೆಯಬೇಕು. ಆದ್ರೆ, ಇದು ಭಾವನಾತ್ಮಕ ವಿಷಯವಾಗಿದೆ ಎನ್ನುವುದು ತನ್ನ ಪಕ್ಷದ ಕೇರಳ ಘಟಕದ ಅಭಿಪ್ರಾಯ ಎಂದರು.ಇನ್ನು, ರಾಹುಲ್​ರ ಈ ಹೇಳಿಕೆಯನ್ನು ಕೇರಳ ಸಿಎಂ ಪಿಣರಾಯಿ ವಿಜಯನ್​ ಕೂಡ ಸ್ವಾಗತಿಸಿದ್ದಾರೆ. ಅಲ್ಲದೇ, ಈ ವಿಷಯದಲ್ಲಿ ಕೇರಳ ಕಾಂಗ್ರೆಸ್‌​ ಘಟಕವು ರಾಷ್ಟ್ರೀಯ ನಾಯಕತ್ವಕ್ಕಿಂತ ಭಿನ್ನವಾದ ಅಭಿಪ್ರಾಯ ಹೊಂದಿರುವುದು ದುರಾದೃಷ್ಟಕರ ಸಂಗತಿ ಎಂದಿದ್ದಾರೆ.

Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *