ಬೆಂಗಳೂರು: ನಟ ನಿರ್ದೇಶಕ ಅರ್ಜುನ್ ಸರ್ಜಾ, ಎಫ್ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಿರುವ ಸಂಬಂಧ ಇಂದು ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸರ್ಜಾ ಮೇಲೆ ಐಪಿಸಿ ಸೆಕ್ಷನ್ 356 ಹಾಗೂ 354 (A) ಅಡಿ ದೂರು ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಅರ್ಜುನ್ ಸರ್ಜಾ, ಇದು ದುರುದ್ದೇಶಪೂರಿತ ದೂರು, ಇದನ್ನು ರದ್ದು ಮಾಡಬೇಕೆಂದು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್‌ನ ಏಕಸದಸ್ಯಪೀಠ ಅರ್ಜಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.ಪ್ರಕರಣದ ತನಿಖೆ ನಡೆಸುತ್ತಿರುವ ಕಬ್ಬನ್ ಪಾರ್ಕ್ ಪೊಲೀಸರು, ಯಾವುದೇ ಸಂದರ್ಭದಲ್ಲಿ ಸರ್ಜಾ ವಿರುದ್ಧ ಕ್ರಮ ಜರುಗಿಸುವ ಸಾಧ್ಯತೆ ಇದೆ. ಆದ್ದರಿಂದ ಈ ಅರ್ಜಿ ಇತ್ಯರ್ಥವಾಗುವವರೆಗೆ ಎಫ್‌ಐಆರ್ ಹಾಗೂ ಮುಂದಿನ ಪ್ರಕ್ರಿಯೆಗಳಿಗೆ ತಡೆ ನೀಡಬೇಕು ಎಂದು ಕೋರಿ ಸರ್ಜಾ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





