Breaking News

ಖೆಡ್ಡಾಗೆ ಬಿದ್ದ ಇಬ್ಬರು ಅಂತರ್‌ರಾಜ್ಯ ಕಳ್ಳಿಯರು..

ಮೈಸೂರು : ತಮಿಳುನಾಡು ಮೂಲದ ಇಬ್ಬರು ಅಂತರ್‌ರಾಜ್ಯ ಕಳ್ಳಿಯರನ್ನ ಮೈಸೂರು ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಅಪರಾಧ ವಿಭಾಗದ ಡಿಸಿಪಿ ಡಾ. ವಿಕ್ರಂ ಅಮಟೆ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ ವೇಳೆ 40 ವರ್ಷದ ಉಷಾರಾಣಿ ಹಾಗೂ 24 ವರ್ಷದ ರೂಪಾ ಎಂಬ ಆರೋಪಿಗಳನ್ನ ಬಂಧಿಸಲಾಗಿದೆ. ಇನ್ನು ಬಂಧಿತರಿಂದ ₹7.30 ಲಕ್ಷ ಮೌಲ್ಯದ 244 ಗ್ರಾಂ. ಚಿನ್ನಾಭರಣ ಹಾಗೂ ₹45 ಸಾವಿರ ರೂಪಾಯಿ ನಗದನ್ನ ವಶಕ್ಕೆ ಪಡೆಯಲಾಗಿದೆ. ಇನ್ನು ದಸರಾ ಸಂದರ್ಭದಲ್ಲಿ ಪಿಕ್ ಪಾಕೆಟ್ ಕಳ್ಳರ ಬಂಧನಕ್ಕೆ ಮೈಸೂರು ಅಪಾರಧ ವಿಭಾಗ ಬಲೆ ಬೀಸಿದ್ದು ಮೈಸೂರಿನ ಖಾಸಗಿ ಲಾಡ್ಜ್ ನಲ್ಲಿ ತಂಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳ ವಿರುದ್ಧ ಮೈಸೂರಿನ ಹಲವು ಠಾಣೆಗಳಲ್ಲಿ ಕಳವು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಬಂಧಿತ ಉಷಾ ಬೆಂಗಳೂರಿನಲ್ಲಿ ಒಮ್ಮೆ ಬಂಧಿತಳಾಗಿ ಸೆರೆಮನೆವಾಸ ಅನುಭವಿಸಿದ್ದಳು ಎನ್ನಲಾಗಿದೆ.

Share News

About Shaikh BIG TV NEWS, Hubballi

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *