Breaking News

ಸಿಎಂ ಹೆಚ್​.ಡಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲು..

ಶಿವಮೊಗ್ಗ: ಸಿಎಂ ಕುಮಾರಸ್ವಾಮಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಜಿಲ್ಲಾ ಚುನಾವಣಾಧಿಕಾರಿಗಳು ದೂರು ದಾಖಲಿಸಿಕೊಂಡಿದ್ದಾರೆ. ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಆ ಭಾಗದ ಜನರಿಗೆ ನೀರಾವರಿ ಯೋಜನೆ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಜಿಲ್ಲಾ‌ ಬಿಜೆಪಿ ಘಟಕದಿಂದ ಸಿಎಂ ಕುಮಾರಸ್ವಾಮಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ. ಮಧು‌ ಬಂಗಾರಪ್ಪನಿಗೆ ಮತ ಹಾಕಿ, ಈ ಭಾಗದ ನೀರಾವರಿ ಯೋಜನೆಗಳನ್ನು ಮಾಡಿಕೊಡುತ್ತೇನೆ ಎಂದು ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About Shaikh BIG TV NEWS, Hubballi

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *