ತಿರುವನಂತಪುರ: 10 ರಿಂದ 50 ವರ್ಷದೊಳಗಿನ ಮಹಿಳೆಯರಿಗೂ ಶಬರಿಮಲೆ ಪ್ರವೇಶಕ್ಕೆ ಅವಕಾಶ ನೀಡಿ, ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದ ಬೆನ್ನಲ್ಲೇ ಭಾರೀ ಕೋಲಾಹಲ ಉಂಟಾಗಿತ್ತು. ಸುಪ್ರೀಂ ತೀರ್ಪಿನ ಬಳಿಕ ಮೊದಲ ಬಾರಿಗೆ ಶಬರಿಮಲೆ ದೇಗುಲದ ಬಾಗಿಲು ಕಳೆದ ತಿಂಗಳ ಅಕ್ಟೋಬರ್ 17ರಂದು ತೆರೆದಿತ್ತು. ಈ ವೇಳೆ ಪತ್ರಕರ್ತೆ ಹಾಗೂ ಸಮಾಜ ಸೇವಕಿ ಸೇರಿದಂತೆ ಸುಮಾರು 12 ಜನ ಮಹಿಳೆಯರು ದೇಗುಲಕ್ಕೆ ಪ್ರವೇಶಿಸಲು ಮುಂದಾಗಿದ್ದರು. ಇದಕ್ಕೆ ಹಿಂದೂ ಸಂಘಟನೆಗಳು ಹಾಗೂ ದೇವಸ್ಥಾನದ ಮಂಡಳಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೇ ಹಿಂಸಾಚಾರ ಘಟನೆಗಳು ಸಂಭವಿಸಿದ್ದವು.ಈ ಎಲ್ಲಾ ಬೆಳವಣಿಗೆಯ ಬಳಿಕ ಇದೀಗ ನಾಳೆ ಒಂದು ದಿನಕ್ಕೆ ಮಾತ್ರ, ಎರಡನೇ ಬಾರಿಗೆ ಶಬರಿಮಲೆ ದೇವಸ್ಥಾನದ ಬಾಗಿಲು ತೆರೆಯಲಾಗುತ್ತಿದೆ. ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಿರುವ ಕೇರಳ ಪೊಲೀಸರು, ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ದೇಗುಲದ ಸುತ್ತಮುತ್ತಲ ಪ್ರದೇಶಗಳಲ್ಲಿ ಸ್ಥಳೀಯ ಪ್ರದೇಶದಲ್ಲಿ ಸೆಕ್ಷನ್144 ಜಾರಿಗೊಳಿಸಲಾಗಿದೆ. ಪಂಬ, ನಿಲ್ಲಕ್ಕಲ್, ಇಲವೊಂಕಲ್ ಗ್ರಾಮಗಳಲ್ಲಿ ನಾಳೆಯಿಂದ ನವೆಂಬರ್ 6 ರವರಿಗೆ ಸೆಕ್ಷನ್ 144 ಜಾರಿಯಾಗಿದ್ದು, ನಾಲ್ಕಕ್ಕಿಂತ ಹೆಚ್ಚು ಮಂದಿ ಗುಂಪುಗೂಡುವುದನ್ನ ನಿಷೇಧಿಸಲಾಗಿದೆ. ಅಲ್ಲದೇ 1500 ಮಂದಿ ಪೊಲೀಸರನ್ನ ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ನಿಲಕ್ಕಲ್ ಮಾರ್ಗದ ರಸ್ತೆಯಲ್ಲಿ ಪೊಲೀಸ್ ಬ್ಯಾರಿಕೇಡ್ಗಳನ್ನ ಹಾಕಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





