ಜಮಖಂಡಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮಗೌಡ ಭಾರೀ ಅಂತರದಿಂದ ಜಯಗಳಿಸಿದ್ದಾರೆ. ಮೊದಲ ಹಂತದ ಮತ ಎಣಿಕೆಯಿಂದಲೂ ಮುನ್ನಡೆ ಕಾಯ್ದುಕೊಂಡು ಬಂದಿದ್ದ ಆನಂದ ನ್ಯಾಮಗೌಡ ಎಲ್ಲರ ನಿರೀಕ್ಷೆಯಂತೆ ಜಯಭೇರಿ ಬಾರಿಸಿದ್ದಾರೆ.ಜಮಖಂಡಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಆನಂದ್ ನ್ಯಾಮಗೌಡ 96,968 ಮತಗಳನ್ನು ಪಡೆದಿದ್ದರೆ, ಬಿಜೆಪಿಯ ಶ್ರೀಕಾಂತ್ ಕುಲಕರ್ಣಿ ಅವರು 57,492 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.ಈ ಮೂಲಕ ಕಳೆದ ಐದು ತಿಂಗಳ ಅಂತರದಲ್ಲಿ ಜಮಖಂಡಿ ಕ್ಷೇತ್ರಕ್ಕೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಎರಡು ಬಾರಿ ಕಾಂಗ್ರೆಸ್ ವಿರುದ್ಧ ಶ್ರೀಕಾಂತ ಕುಲಕರ್ಣಿ ಸೋಲನುಭವಿಸಿದಂತಾಗಿದೆ.ಈ ಸಂದರ್ಭದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಆನಂದ್ ನ್ಯಾಮಗೌಡ, ತಂದೆ ಸಿದ್ದು ನ್ಯಾಮಗೌಡ ಅವರ ಸಾವಿನ ಅನುಕಂಪ, ಅವರು ಮಾಡಿದ ಅಭಿವೃದ್ಧಿ ಕಾರ್ಯಗಳು, ಯುವ ನಾಯಕತ್ವದ ಬಯಕೆ ಹಾಗೂ ಪಕ್ಷದ ನಾಯಕರು ನನ್ನ ಪರ ಪ್ರಚಾರ ಮಾಡಿದ ಫಲವಾಗಿ ಇಂದು ನನಗೆ ಗೆಲುವು ದೊರೆತಿದೆ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





