ಬೆಂಗಳೂರು: ಆ್ಯಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಸಿಲುಕಿರುವ ಗಾಲಿ ಜನಾರ್ದನ ರೆಡ್ಡಿಗೆ ಬಂಧನದ ಭೀತಿ ಶುರುವಾಗಿದೆ. ಸದ್ಯ ತಲೆಮರೆಸಿಕೊಂಡಿರುವ ಜನಾರ್ದನ ರೆಡ್ಡಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. ಮೂವರು ಎಸಿಪಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಹೈದ್ರಾಬಾದ್ನಲ್ಲಿ ಜನಾರ್ದನ ರೆಡ್ಡಿ ತಲೆಮರೆಸಿಕೊಂಡಿದ್ದಾರೆ ಅನ್ನೋ ಸಂಶಯ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಎಸಿಪಿ ಸುಬ್ರಹ್ಮಣ್ಯ ನೇತೃತ್ವ ಟೀಂ ಅಲ್ಲಿಗೆ ತೆರಳಿ ಹುಟುಕಾಟ ನಡೆಸುತ್ತಿದೆ. ಹಾಗೇ ಇನ್ನೊಂದು ಟೀಂ ಅಂದ್ರೆ ಎಸಿಪಿ ವೆಂಕಟೇಶ ಪ್ರಸನ್ನ ನೇತೃತ್ವದ ತಂಡ ಬೆಂಗಳೂರಿನಲ್ಲಿ ಜನಾರ್ದನ ರೆಡ್ಡಿಗೆ ಬಲೆ ಬೀಸಿದೆ. ಎಸಿಪಿ ಮಂಜುನಾಥ ಚೌಧರಿ ಟೀಂ ಬಳ್ಳಾರಿಯಲ್ಲಿ ಹುಡುಕಾಟ ನಡೆಸ್ತಿದೆ.
ಬಂಧನದ ಭೀತಿ ಹಿನ್ನೆಲೆಯಲ್ಲಿ ರೆಡ್ಡಿ ಅವರ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಇದೀಗ ಮೊಬೈಲ್ ಲೋಕೇಷನ್ ತಿಳಿದು ಬಂದಿದೆ ಎನ್ನಲಾಗಿದೆ. ಮತ್ತೊಂದು ಕಡೆ ರೆಡ್ಡಿ ಕುಟುಂಬಸ್ಥರು ಹಾಗೇ ಸ್ನೇಹಿತರು, 15 ಸಂಬಂಧಿಕರ ಮನೆಗಳನ್ನ ಪೊಲೀಸರು ಟಾರ್ಗೆಟ್ ಮಾಡಿದ್ದಾರೆ. ಹೀಗೆ ರೆಡ್ಡಿಗಾಗಿ ಹೈದ್ರಾಬಾದ್, ಚೆನ್ನೈ, ಬೆಂಗಳೂರು, ಬಳ್ಳಾರಿ ಸೇರಿದಂತೆ ಅನೇಕ ಕಡೆಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಮತ್ತೊಂದು ಕಡೆ, ಇಂದು ರೆಡ್ಡಿಗೆ ನಿರೀಕ್ಷಣಾ ಜಾಮೀನು ಸಿಗಲ್ಲ. ಇಂದು ದೀಪಾವಳಿ ಆಗಿರುವ ಹಿನ್ನೆಲೆಯಲ್ಲಿ ಕೋರ್ಟ್ಗೆ ರಜೆ ಇದೆ. ಈ ಹಿನ್ನೆಲೆಯಲ್ಲಿ ರೆಡ್ಡಿಯನ್ನ ಇಂದು ಬಂಧಿಸಲೇಬೇಕು ಎಂದು ನಿರ್ಧರಿಸಿರುವ ಸಿಸಿಬಿ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





