ಕೊಡಗು: ಕೊಡಗಿನಲ್ಲಿ ಟಿಪ್ಪು ಜಯಂತಿ ವಿಚಾರವಾಗಿ ಗಲಾಟೆ-ಗದ್ದಲ ನಡೆಯುತ್ತಿದೆ. ಬಿಜೆಪಿ ಕಾರ್ಯಕರ್ತರು ಟಿಪ್ಪು ಜಯಂತಿ ಆಚರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪ್ರತಿಭಟನಾನಿರತ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ದಾರೆ.ಜಿಲ್ಲಾಧಿಕಾರಿ-ಎಂಎಲ್‌ಸಿ ಮಾತಿನ ಚಕಮಕಿಕೋಟೆ ಆವರಣದಲ್ಲಿ ಟಿಪ್ಪು ಜಯಂತಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ. ಈ ಸ್ಥಳಕ್ಕೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ತೆರಳಿದ ವೇಳೆ ಜಿಲ್ಲಾಧಿಕಾರಿ ಶ್ರೀವಿದ್ಯಾ ಪ್ರವೇಶಕ್ಕೆ ಅನುಮತಿ ನಿರಾಕರಿಸಿದರು. ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲದವರನ್ನ ಒಳಗೆ ಬಿಡುವುದಿಲ್ಲ ಎಂದು ಹೇಳಿದರು. ಇದಕ್ಕೆ ಎಂಎಲ್‌ಸಿ ಸುನಿಲ್ ಸುಬ್ರಮಣಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಡಿಸಿ ಶ್ರೀವಿದ್ಯಾ ಮತ್ತು ಎಂಎಲ್‌ಸಿ ಸುನಿಲ್ ಸುಬ್ರಮಣಿ ನಡುವೆ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಅಪ್ಪಚ್ಚು ರಂಜನ್ ಕೂಡ ಉಪಸ್ಥಿತರಿದ್ದರು.ಶಾಸಕ ಅಪ್ಪಚ್ಚು ರಂಜನ್, ಎಂಎಲ್‌ಸಿ ಸುನಿಲ್ ಸುಬ್ರಮಣಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಧರಿಸಿಕೊಂಡು ಟಿಪ್ಪು ಜಯಂತಿಗೆ ವಿರೋಧ ವ್ಯಕ್ತಪಡಿಸಿದರು. ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನಾನಿರತರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದು, ಹಲವರನ್ನ ಬಂಧಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





