Breaking News

ಕಟ್ಟಡ ಕುಸಿದು ಓರ್ವ ಕಾರ್ಮಿಕ ಸಾವು

ಬೆಂಗಳೂರು: ಮೂರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಓರ್ವ ಕಾರ್ಮಿಕ ಮೃತಪಟ್ಟ ದಾರುಣ ಘಟನೆ ಬೆಂಗಳೂರಿನ ತ್ಯಾಗರಾಜನಗರದಲ್ಲಿ ಶನಿವಾರ ಸಂಜೆ ನಡೆದಿದೆ.ತ್ಯಾಗರಾಜನಗರದ ಸಾಯಿಬಾಬಾ ದೇಗುಲದ ಬಳಿ 2ನೇ ಕ್ರಾಸ್​ನಲ್ಲಿ ಈ ಘಟನೆ ನಡೆದಿದ್ದು, ಮೃತ ಕಾರ್ಮಿಕನನ್ನು ಸುಹೇಲ್ ಎಂದು ಗುರುತಿಸಲಾಗಿದೆ.ಕಟ್ಟಡದಲ್ಲಿ ನಾಲ್ವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಇನ್ನು ಮೂವರು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಪಕ್ಕದ ಕಟ್ಟಡದಲ್ಲಿ ವಾಸವಿರುವ ಜನರನ್ನು ಸ್ಥಳಾಂತರಿಸಲಾಗಿದೆ.ಕಳಪೆ ಕಾಮಗಾರಿಯಿಂದಾಗಿ ಕಟ್ಟಡ ಹಠಾತ್ತನೆ ಕುಸಿದು ಬಿದ್ದಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಸಂಬಂಧ ತ್ಯಾಗರಾಜನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಟ್ಟಡದ ಮಾಲೀಕ ಹಾಗೂ ಗುತ್ತಿಗೆದಾರನ ವಿಚಾರಣೆ ನಡೆಸುತ್ತಿದ್ದಾರೆ.

Share News

About Shaikh BIG TV NEWS, Hubballi

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *