Breaking News

22ಕ್ಕೆ ಬಿಜೆಪಿ ವಿರೋಧಿ ಪಕ್ಷಗಳ ಸಭೆ ಕರೆದ ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಇದೇ ನವೆಂಬರ್ 22ಕ್ಕೆ ಚಂದ್ರಬಾಬು ನಾಯ್ಡು ಬಿಜೆಪಿ ಜೊತೆ ಮೈತ್ರಿಗೆ ಕೈಜೋಡಿಸದ ದೇಶದ ಎಲ್ಲಾ ಪಕ್ಷಗಳ ಸಭೆ ಕರೆದಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ವಿರುದ್ಧವಾಗಿ ತೃತೀಯರಂಗ ನಿರ್ಮಾಣಕ್ಕೆ ಟಿಡಿಪಿ ಮುಖ್ಯಸ್ಥ, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಪಣತೊಟ್ಟಿದ್ದು, ಕೆಲ ದಿನಗಳಿಂದ ದೇಶದ ಪ್ರಮುಖ ಪ್ರಾದೇಶಿಕ ಪಕ್ಷಗಳ ಮುಖಂಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದಾದ ಬಳಿಕ ಸಭೆಯನ್ನು ಕರೆದಿದ್ದಾರೆ. ಈ ಸಭೆ ದೆಹಲಿಯಲ್ಲಿರುವ ಆಂಧ್ರಪ್ರದೇಶ ಭವನದಲ್ಲಿ ನಡೆಯಲಿದ್ದು, ಪ್ರಮುಖ ಪ್ರಾದೇಶಿಕ ಪಕ್ಷಗಳ ನಾಯಕರು ಭಾಗಿಯಾಗಲಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ರೂಪುರೇಷೆಗಳನ್ನು ರಚಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಬಿಜೆಪಿಗೆ ವಿರುದ್ಧ ಮಹಾಘಟಬಂಧನ್ ಮಾಡಿಕೊಳ್ಳಲು ಎಲ್ಲಾ ಬಿಜೆಪಿ ವಿರೋಧ ಪಕ್ಷಗಳು ಒಂದಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಸಹ ಭೇಟಿಯಾಗಿ ನಾಯ್ಡು ಮಾತುಕತೆ ನಡೆಸಿದ್ದರು. ಇದಾದ ಬಳಿಕ ನಿನ್ನೆ ಕಾಂಗ್ರೆಸ್ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್‌ರನ್ನು ಅಮರಾವತಿಯಲ್ಲಿ ಭೇಟಿಯಾಗಿದ್ದರು. ಆಗ ಸಭೆ ನಡೆಸುವ ಬಗ್ಗೆ ನಿರ್ಣಯ ಕೈಗೊಂಡಿದ್ದಾರೆ.ಇದಕ್ಕೂ ಮುನ್ನ ಕರ್ನಾಟಕಕ್ಕೂ ಭೇಟಿ ನೀಡಿದ್ದ ಚಂದ್ರಬಾಬು ನಾಯ್ಡು, ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರ ಜೊತೆ ತೃತೀಯರಂಗ ರಚನೆ ಕುರಿತು ಮಾತುಕತೆ ನಡೆಸಿದ್ದರು. ಅಲ್ಲದೇ ಎನ್‌ಸಿಪಿ ಮುಖ್ಯಸ್ಥ ಶರಾದ್‌ ಪವಾರ್‌, ನ್ಯಾಷನಲ್ ಕಾನ್ಫ್‌ರೆನ್ಸ್‌ ಮುಖ್ಯಸ್ಥ ಫಾರುಕ್ ಅಬ್ದುಲ್ಲಾರನ್ನು ಭೇಟಿ ಮಾಡಿದ್ದರು. ಮೊನ್ನೆ ತಮಿಳುನಾಡು ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್‌ರನ್ನು ಭೇಟಿಯಾಗಿದ್ದ ಚಂದ್ರಬಾಬು ನಾಯ್ಡು ತಮ್ಮ ಜೊತೆ ಕೈ ಜೋಡಿಸುವಂತೆ ಮನವಿ ಮಾಡಿದ್ರು.

Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *