Breaking News

ಶಿವಮೊಗ್ಗ: ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿ ಸ್ಫೋಟ, ಚಾಲಕ ಸಜೀವ ದಹನ

ಸಾಗರ: ಸಾಗರ ತಾಳಗುಪ್ಪ ಮಧ್ಯೆ ಮುಂಡಿಗೆಹಳ್ಳಿಯ ಬಳಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಯೊಂದು ಸ್ಫೋಟಗೊಂಡಿದ್ದು, ಚಾಲಕ ಸಜೀವ ದಹನವಾಗಿರುವ ಧಾರುಣ ಘಟನೆ ಸಂಭವಿಸಿದೆ.ಸಾಗರದಿಂದ ಕಾರ್ಗಲ್ ಕಡೆಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಇಂಡಿಯನ್ ಗ್ಯಾಸ್ ಸಂಸ್ಥೆಗೆ ಸೇರಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದ್ದು, ರಭಸಕ್ಕೆ 20ಕ್ಕೂ ಹೆಚ್ಚು ಸಿಲಿಂಡರ್ ಗಳು ಸ್ಫೋಟಗೊಂಡಿವೆ. ಈ ಅವಘಡದಲ್ಲಿ ಚಾಲಕ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ.ಮುಂಜಾನೆ ನಾಲ್ಕೂವರೆ ಗಂಟೆ ವೇಳೆ ಈ ಘಟನೆ ಸಂಭವಿಸಿದ್ದು, ಲಾರಿ ಸಂಪೂರ್ಣವಾಗಿ ಭಸ್ಮವಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಫೋಟದಿಂದಾಗಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ.

Share News

About Shaikh BIG TV NEWS, Hubballi

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *