Breaking News

ರೈತರಿಂದ ಮುತ್ತಿಗೆ ಸಾಧ್ಯತೆ: ವಿಧಾನಸೌಧಕ್ಕೆ ಬಿಗಿ ಭದ್ರತೆ..

ಬೆಂಗಳೂರು: ಕಬ್ಬು ಸೇರಿದಂತೆ ವಿವಿಧ ಬೆಳೆಗಳ ಬೆಂಬಲ ಬೆಲೆಗೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ರೈತರು ನಡೆಸುತ್ತಿರುವ ಪ್ರತಿಭಟನೆ ಇಂದು ರಾಜಧಾನಿ ತಲುಪಿದೆ. ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆಗೆ ಕರೆ ನೀಡಿರುವುದರಿಂದ ವಿವಿಧ ಜಿಲ್ಲೆಗಳಿಂದ ರೈತರು ನಗರದತ್ತ ಆಗಮಿಸುತ್ತಿದ್ದಾರೆ. ವಿಧಾನಸೌಧಕ್ಕೆ ರೈತರ ಮುತ್ತಿಗೆ ಸಾಧ್ಯತೆ ಹಿನ್ನೆಲೆಯಲ್ಲಿ, ಶಕ್ತಿಸೌಧ ವಿಧಾನಸೌಧಕ್ಕೆ ಬಿಗಿ ಪೊಲೀಸ್​ ಭದ್ರತೆ ಏರ್ಪಡಿಸಲಾಗಿದೆ. ವಿಧಾನಸೌಧ ಸುತ್ತಮುತ್ತ ಭಾರೀ ಬಂದೋಬಸ್ತ್ ಮಾಡಲಾಗಿದ್ದು, ಸುಮಾರು ಸಾವಿರಕ್ಕೂ ಹೆಚ್ಚು ಪೋಲಿಸರನ್ನ ನಿಯೋಜನೆ ಮಾಡಲಾಗಿದೆ. ರಾಜ್ಯದ ವಿವಿಧೆಡೆಯಿಂದ ರಾಜಧಾನಿ ಬೆಂಗಳೂರಿಗೆ ಆಗಮಿಸುತ್ತಿರುವ ಸಾವಿರಾರು ರೈತರು, ಹನ್ನೊಂದು ಗಂಟೆ ಸುಮಾರಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಸಾಧ್ಯತೆಯಿದೆ. ಹೀಗಾಗಿ ವಿಧಾನಸೌಧದ ಎಲ್ಲಾ ದ್ವಾರಗಳಲ್ಲೂ ವ್ಯಾಪಕ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.ನಿನ್ನೆಯಷ್ಟೇ ಸಿಎಂ ಹೆಚ್.ಡಿ ಕುಮಾರಸ್ವಾಮಿ ರೈತರನ್ನ ಗೂಂಡಾಗಳಿಗೆ ಹೋಲಿಕೆ ಹಾಗೂ ರೈತ ಮಹಿಳೆ ಬಗ್ಗೆ ಹೇಳಿಕೆ ನೀಡಿದನ್ನ ಖಂಡಿಸಿ ಇಂದು ವಿಧಾನಸೌಧ ಮುತ್ತಿಗೆಗೆ ರೈತರು ನಿರ್ಧರಿಸಿದ್ದಾರೆ.ಅಷ್ಟಕ್ಕೂ ನಿನ್ನೆ ಸಿಎಂ ಕುಮಾರಸ್ವಾಮಿ ಹೇಳಿದ್ದೇನು..?

Share News

About Shaikh BIG TV NEWS, Hubballi

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *