ಬೆಂಗಳೂರು: ಕಬ್ಬು ಬೆಳೆಗಾರರ ತೀವ್ರ ಪ್ರತಿಭಟನೆ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸುತ್ತಿದ್ದ ವೇಳೆ ಕನ್ನಡ ಭಾಷೆ ಮೇಲಿನ ಪ್ರೀತಿ ತೋರಿಸಿ ಗಮನ ಸೆಳೆದರು.ಕಳೆದ ಎರಡು ದಿನಗಳಿಂದ ಕಬ್ಬು ಬೆಳೆಗಾರರ ತೀವ್ರ ಆಕ್ರೋಶಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಗುರಿಯಾಗಿದ್ದರು. ಈ ಹಿನ್ನಲೆಯಲ್ಲಿ ನಿನ್ನೆ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜತೆ ಸಭೆ ನಡೆಸಿದರು. ಸಭೆ ವೇಳೆ ಸಕ್ಕರೆ ಕಾರ್ಖಾನೆ ಮಾಲಿಕರ ಸಂಘದ ಅಧ್ಯಕ್ಷ ವಿಜಯ್ ರೆಡ್ಡಿಯವರನ್ನು ರೈತರಿಗೆ ಕೊಡಲು ಎಷ್ಟು ಹಣ ಬಾಕಿ ಉಳಿಸಿಕೊಂಡಿದ್ದೀರಿ ಮತ್ತು ಕಾರಣವೇನು ಎಂದು ಕೇಳಿದರು. ಅದಕ್ಕೆ ವಿಜಯ್ ರೆಡ್ಡಿ ಆಂಗ್ಲ ಭಾಷೆಯಲ್ಲಿ ಉತ್ತರಿಸಲು ನೋಡಿದರು. ಇದರಿಂದ ಸಿಟ್ಟಿಗೆದ್ದ ಸಿಎಂ, ಕನ್ನಡದಲ್ಲಿ ಮಾತನಾಡಿ, ಇಂಗ್ಲೀಷ್ನಲ್ಲಿ ಯಾಕೆ ಮಾತನಾಡುತ್ತಿದ್ದೀರಿ ಎಂದರು.ಮೂಲಗಳ ಪ್ರಕಾರ, ವಿಜಯ್ ರೆಡ್ಡಿ ತಮಗೆ ಕನ್ನಡ ಬರುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದಾಗ ಕುಮಾರಸ್ವಾಮಿ ಇನ್ನಷ್ಟು ಕೋಪಗೊಂಡು, ಕನ್ನಡದಲ್ಲಿ ಮಾತನಾಡುವುದನ್ನು ಮೊದಲು ಕಲಿಯಿರಿ ಎಂದು ತರಾಟೆ ತೆಗೆದುಕೊಂಡಿದ್ದಾರೆ. ಜತೆಗೆ ಹೊರ ರಾಜ್ಯದವರನ್ನು ಕರ್ನಾಟಕ ಸಕ್ಕರೆ ಕಾರ್ಖಾನೆಗಳ ಸಂಘದ ಅಧ್ಯಕ್ಷರನ್ನಾಗಿ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು ಎಂದು ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





