Breaking News

ಲಾರಿ-ಬೊಲೆರೋ ಅಪಘಾತದಲ್ಲಿ ಐವರು ಸಾವು, ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರದ ಹೊನಗನಹಳ್ಳಿ ಹೊರವಲಯದಲ್ಲಿ ಸಂಭವಿಸಿದ ಅಪಘಾತದಲ್ಲಿ ಐವರು ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಕಳೆದ ತಡರಾತ್ರಿ ನಡೆದಿದೆ.ಏಳು ಮಂದಿ ದಿನಗೂಲಿ ನೌಕರರನ್ನು ಹೊತ್ತು ಸಾಗುತ್ತಿದ್ದ ಬೊಲೆರೋ ಪಿಕ್ಅಪ್ ವಾಹನ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಲಾರಿ ಚಾಲಕ ಮತ್ತು ಕ್ಲೀನರ್ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಎಲ್ಲಾ ಏಳು ಮಂದಿ ದಿನಗೂಲಿ ನೌಕರರು ಪುಣೆಗೆ ಸೇರಿದವರಾಗಿದ್ದಾರೆ.ಇವರು ವಿಜಯಪುರ ಮತ್ತು ಬಾಗಲಕೋಟೆ ಮಧ್ಯೆ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ರಸ್ತೆ ದ್ವಿಗುಣಗೊಳಿಸುವ ಕಾಮಗಾರಿಯಲ್ಲಿ ಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದರೆ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಪೊಲೀಸರು ಮೃತಪಟ್ಟವರನ್ನು ಗುರುತಿಸಬೇಕಾಗಿದ್ದು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಲಾರಿ ಚಾಲಕನ ವಿರುದ್ಧ ಕೇಸು ದಾಖಲಾಗಿದೆ..

Share News

About Shaikh BIG TV NEWS, Hubballi

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *