Breaking News

ಸಾವಿರಕ್ಕೂ ಹೆಚ್ಚು ರೈತರ ಸಾಲಮನ್ನಾ ಮಾಡಿದ ಬಿಗ್​ಬಿ..!

ಮುಂಬೈ: ಬಾಲಿವುಡ್​ ಬಿಗ್​ ಬಿ ಅಮಿತಾಭ್​ ಬಚ್ಚನ್​ ರೈತರ ವಿಚಾರದಲ್ಲಿ ಹೇಳಿದಂತೆ ನಡೆದುಕೊಂಡಿದ್ದಾರೆ. ಉತ್ತರ ಪ್ರದೇಶದ ರೈತರ ಸಾಲ ತೀರಿಸುವ ಮೂಲಕ ಎಲ್ಲರ ಕೀರ್ತಿಗೂ ಪಾತ್ರರಾಗಿದ್ದಾರೆ. ಈ ಬಗ್ಗೆ ಸ್ವತಃ ಅಮಿತಾಬ್​ ಅವರೇ ತಮ್ಮ ಬ್ಲಾಗ್​ನಲ್ಲಿ ಬರೆದುಕೊಂಡಿದ್ದು, ಉತ್ತರ ಪ್ರದೇಶದ ಸುಮಾರು 1,398 ರೈತರ 4 ಕೋಟಿ ಸಾಲವನ್ನು ಪಾವತಿಸಿ ಅವರಿಗೆ ನೆರವಾಗಿದ್ದೇನೆ ಎಂದು ತಿಳಿಸಿದ್ದಾರೆ.ಬಿಗ್​ ಬಿ ಬ್ಲಾಗ್​ನಲ್ಲಿ ಏನಿದೆ..?ಸಂಕಷ್ಟದಲ್ಲಿದ್ದ ಮಹಾರಾಷ್ಟ್ರದ 350 ರೈತರ ಸಾಲವನ್ನು ತೀರಿಸಿ ಅವರಿಗೆ ಈ ಹಿಂದೆ ನೆರವಾಗಿದ್ದೆ. ಈಗ ಉತ್ತರ ಪ್ರದೇಶದ ರೈತರನ್ನು ಗುರುತಿಸಿದ್ದೇನೆ. ಯುಪಿಯ ಒಟ್ಟು 1,398 ರೈತರ 4 ಕೋಟಿ ಸಾಲವನ್ನು ಪಾವತಿಸಿದ್ದೇನೆ. ರೈತರ ಸಾಲ ಮನ್ನಾ ಮಾಡಿ ನನಗೆ ತೃಪ್ತಿಯಾಗಿದೆ. ದೇಶಕ್ಕಾಗಿ ತ್ಯಾಗ ಮಾಡವುದು ರೈತರಿಗೆ ನೆರವು ನೀಡುವುದು ನಮ್ಮೆಲ್ಲರ ಕರ್ತವ್ಯ. ದೇಶದ ಹಲವು ಪ್ರದೇಶದಲ್ಲಿ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ ಅವರನ್ನ ಸಹಾಯ ಮಾಡುವುದು ಮುಖ್ಯ ಎಂದಿದ್ದಾರೆ.

Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *