ಗೋವಾ: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಗೋವಾದ ವಿಪಕ್ಷಗಳು 48 ಗಂಟೆ ಡೆಡ್ಲೈನ್ ನೀಡಿವೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಹಾಗೂ ನೂರಾರು ಕಾರ್ಯಕರ್ತರು ಮೆರವಣಿಗೆ ಮೂಲಕ ಪರಿಕ್ಕರ್ ನಿವಾಸದ ಎದುರು ಪ್ರತಿಭಟನೆ ನಡೆಸಿದರು. ಪರಿಕ್ಕರ್ 9 ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ. ಆಡಳಿತ ಮರು ಸ್ಥಾಪನೆಗೆ ಪರಿಕ್ಕರ್ ರಾಜೀನಾಮೆ ನೀಡಬೇಕು ಅಂತಾ ಒತ್ತಾಯಿಸಿದ್ದಾರೆ. ಇನ್ನು ಪ್ರತಿಭಟನೆಗೆ ಎನ್ಸಿಪಿ, ಶಿವಸೇನೆ ಸೇರಿದಂತೆ ಎನ್ಜಿಓ ಕಾರ್ಯಕರ್ತರು ಸಾಥ್ ನೀಡಿದ್ದು ನಮಗೆ ಪೂರ್ಣಾವಧಿಯ ಮುಖ್ಯಮಂತ್ರಿ ಬೇಕಿದೆ ಅಂತಾ ಪಟ್ಟು ಹಿಡಿದಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news





