ಹೈದರಾಬಾದ್ : ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಸಜ್ಜಾಗಿರುವ ತೆಲಂಗಾಣ ಮಾಜಿ ಸಿಎಂ ಹಾಗೂ ಟಿಆರ್ಎಸ್ ಪಕ್ಷದ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್, ಬಿಜೆಪಿ ಕಾಂಗ್ರೆಸ್ ಎರಡೂ ಪಕ್ಷಗಳ ವಿರುದ್ಧವೂ ಮುಗಿಬಿದ್ದಿದ್ದಾರೆ. ಬಿಜೆಪಿ ಕಾಂಗ್ರೆಸ್ ಇಬ್ಬರೂ ಅಣ್ಣ-ತಮ್ಮಂದಿರ ಹಾಗೇ ಇಬ್ಬರನ್ನೂ ನಂಬಲು ಸಾಧ್ಯವಿಲ್ಲ ಅಂತಾ ಹೇಳಿದ್ದಾರೆ. ದೇವರಕೊಂಡದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾವ್, ತೆಲಂಗಾಣ ವಿಧಾನಸಭೆ ಚುನಾವನೆ ಬಳಿಕ ರಾಷ್ಟ್ರ ರಾಜಕಾರಣಕ್ಕೆ ತಾವು ಧುಮುಕುವುದಾಗಿ ತಿಳಿಸಿದ್ದಾರೆ. ಅಲ್ಲದೇ, ತಮ್ಮ ಅವಧಿಯಲ್ಲಿ ಭರವಸೆ ನೀಡಿದ್ದ ರಾಜ್ಯದ ಎಲ್ಲಾ ಯೋಜನೆಗಳನ್ನೂ ಇನ್ನು ಕೆಲವೇ ತಿಂಗಳಿನಲ್ಲಿ ಪೂರ್ಣಗೊಳಿಸುವ ಭರವಸೆ ಕೊಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





