ಬೆಂಗಳೂರು: ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ಇಂದು ರಾತ್ರಿ 10.20ಕ್ಕೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಉಸಿರಾಟ ಹಾಗೂ ಶ್ವಾಸಕೋಶ ಸಮಸ್ಯೆಯಿಂದ ಇಂದು ಸಂಜೆ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾಗಿತ್ತು. ಕೂಡಲೇ ಅವರನ್ನ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಟ ಅಂಬರೀಶ್ ಅವರಿಗೆ 66 ವರ್ಷ ವಯಸ್ಸಾಗಿತ್ತು. ಪತ್ನಿ ಸುಮಲತಾ ಮತ್ತು ಪುತ್ರ ಅಭಿಷೇಕ್ ಸೇರಿದಂತೆ ಅನೇಕ ಅಭಿಮಾನಿಗಳನ್ನು ಅಗಲಿದ್ದಾರೆ.ಕನ್ನಡ ಚಿತ್ರರಂಗ ಹಾಗೂ ದಕ್ಷಿಣ ಭಾರತದ ಮೇರು ನಟ ರೆಬೆಲ್ ಸ್ಟಾರ್ ಅಂಬರೀಶ್ ಮೂಲತಃ ಮಂಡ್ಯ ಜಿಲ್ಲೆ ದೊಡ್ಡರಸನಕೆರೆ ಗ್ರಾಮದವರು. ಹುಚ್ಚೇಗೌಡ ಹಾಗೂ ಪದ್ಮಮ್ಮ ದಂಪತಿಯವರ ಪುತ್ರರಾಗಿ ಅಂಬರೀಶ್ 1952 ಮೇ 29ರಂದು ಜನಿಸಿದರು. ಅಂಬರೀಶ್ ಅವರ ಮೂಲ ಹೆಸರು ಮಳವಳ್ಳಿ ಹುಚ್ಚೇಗೌಡ ಅಮರನಾಥ್. ಖ್ಯಾತ ಪಿಟೀಲು ವಿದ್ವಾನ್ ಟಿ. ಚೌಡಯ್ಯ ಇವರ ಅಜ್ಜ. 1972ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ನಾಗರಹಾವು’ ಸಿನಿಮಾದ ಜಲೀಲ ಪಾತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅಂಬರೀಶ್ ಸುಮಾರು 200 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





