Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಇಬ್ಬರು ಅಪ್ರಾಪ್ತರು ಸೇರಿ 6 ಮಂದಿ ಮೀನುಗಾರರಿಂದ ಯುವತಿ ಮೇಲೆ ಅತ್ಯಾಚಾರ

ಮಂಗಳೂರು: ಯುವತಿ ಮೇಲೆ ಮೀನುಗಾರರ ಗುಂಪೊಂದು ಅತ್ಯಾಚಾರ ನಡೆಸಿದ ಪ್ರಕರಣ ಮಂಗಳೂರು ಸಮೀಪ ತೋಟ ಬೆಂಗ್ರೆ ಎಂಬಲ್ಲಿ ನಡೆದಿದೆ.ವಾರದ ಹಿಂದೆ ಈ ಘಟನೆ ನಡೆದಿದ್ದರೂ ಪೊಲೀಸರು ಮಾಹಿತಿ ಪಡೆದು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ.ಯುವತಿ ಮೇಲೆ ಆರು ಮಂದಿ ಮೀನುಗಾರರು ತೋಟ ಬೆಂಗ್ರೆ ಎಂಬಲ್ಲಿ ಅತ್ಯಾಚಾರ ನಡೆಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಟಿ ಆರ್ ಸುರೇಶ್ ಖಚಿತಪಡಿಸಿದ್ದಾರೆ.ವಾರದ ಹಿಂದೆ ಈ ಘಟನೆ ನಡೆದಿದ್ದರೂ ಕೂಡ ಮಾಹಿತಿ ಪಡೆಯುವಾಗ ವಿಳಂಬವಾಯಿತು. ಯುವತಿಯನ್ನು ಪತ್ತೆಹಚ್ಚಿದಾಗ ಪೊಲೀಸರಿಗೆ ನಿನ್ನೆ ಕಂಡುಬಂದಿದ್ದಾಳೆ ಎಂದು ಸುರೇಶ್ ಪತ್ರಿಕೆಗೆ ತಿಳಿಸಿದ್ದಾರೆ.ಯುವತಿಯ ಹೇಳಿಕೆಗಳನ್ನು ದಾಖಲು ಮಾಡಿಕೊಳ್ಳಲಾಗುತ್ತಿದೆ. ಆರು ಮಂದಿ ಶಂಕಿತ ಆರೋಪಿಗಳನ್ನು ವಶಪಡಿಸಲಾಗಿದ್ದು ಶೀಘ್ರವೇ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಸುರೇಶ್ ತಿಳಿಸಿದರು.ಪೊಲೀಸರಿಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಯುವತಿ ತನ್ನ ಮತ್ತೊಬ್ಬ ಸ್ನೇಹಿತೆ ಜೊತೆ ಇದ್ದಳು. ಈ ಸಂದರ್ಭದಲ್ಲಿ ಆರು ಮಂದಿ ದುಷ್ಕರ್ಮಿಗಳ ಗುಂಪು ಎರಗಿ ನಗರದ ಸೂಕ್ಷ್ಮ ಪ್ರದೇಶದಲ್ಲಿ ಅತ್ಯಾಚಾರವೆಸಗಿದೆ. ಘಟನೆಗೆ ಯಾವುದೇ ಅಂತರ ಧರ್ಮೀಯ ಕಲಹ ಸಾಧ್ಯತೆಯನ್ನು ಪೊಲೀಸರು ತಳ್ಳಿ ಹಾಕಿದ್ದಾರೆ.ಯುವತಿ ಮತ್ತು ಶಂಕಿತರು ಒಂದೇ ಸಮುದಾಯಕ್ಕೆ ಸೇರಿದವರಾಗಿರುವುದು ಇಲ್ಲಿ ಮತ್ತೊಂದು ವಿಶೇಷ ಸಂಗತಿ.ಶಂಕಿತರಲ್ಲಿ ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕರು ಕೂಡ ಇದ್ದಾರೆ. ಎಲ್ಲರೂ ತೋಟ ಬೆಂಗ್ರೆಯ ಮೀನುಗಾರರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Share News

About Shaikh BIG TV NEWS, Hubballi

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *