Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಸಂಯಮ ಬೆಳೆಸಿಕೊಳ್ಳಿ: ಮೋದಿಗೆ ಸಿಂಗ್ ಹಿತವಚನ..

ನವದೆಹಲಿ: ಬಿಜೆಪಿಯೇತರ ಸರ್ಕಾರ ಅಧಿಕಾರದಲ್ಲಿರುವ ರಾಜ್ಯಗಳಿಗೆ ಭೇಟಿ ನೀಡಿದ ಸಮಯದಲ್ಲಿ ಸಂಯಮ ಕಾಯ್ದುಕೊಳ್ಳುವಂತೆ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಕಿವಿಮಾತನ್ನು ಹೇಳಿದ್ದಾರೆ. ರಾಜಕೀಯ ಪ್ರತಿಸ್ಪರ್ಧಿಗಳ ವಿರುದ್ಧ ಕೀಳು ಮಟ್ಟದ ಭಾಷೆ ಬಳಸುವುದರಿಂದ ಪ್ರತಿಪಕ್ಷ ಬಿಜೆಪಿಯ ಘನತೆ ಹೆಚ್ಚುವುದಿಲ್ಲ. ಅಸಂಬದ್ಧ ಪದಗಳ ಬಳಕೆಯನ್ನು ನಿಯಂತ್ರಿಸಿಕೊಳ್ಳುವುದು ದೇಶದ ಪ್ರಧಾನಿಯ ಕರ್ತವ್ಯ. ಪ್ರಧಾನಿಯಾದವರು ಎಲ್ಲರಿಗೂ ಉದಾಹರಣೆಯಾಗಿರಬೇಕು ಎಂದು ಸಿಂಗ್ ಹೇಳಿದ್ದಾರೆ.ಮಾಜಿ ಕೇಂದ್ರ ಸಚಿವ ಮನೀಶ್ ತಿವಾರಿ ಅವರ ಪುಸ್ತಕ ಫೇಬಲ್ಸ್ ಆಫ್ ಫ್ರ್ಯಾಕ್ಚರ್ಡ್ ಟೈಮ್ಸ್” ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಮನಮೋಹನ್ ಸಿಂಗ್, ಸಂಯಮ ಬೆಳೆಸಿಕೊಂಡು ಪ್ರಧಾನ ಮಂತ್ರಿ ಹುದ್ದೆಯ ಘನತೆ ಕಾಪಾಡಿಕೊಳ್ಳಬೇಕೆಂಬುದು ಪ್ರಧಾನಮಂತ್ರಿಯವರಿಗೆ ನನ್ನ ಸಲಹೆ” ಎಂದು ನುಡಿದರು.ನಮ್ಮ ಸರ್ಕಾರವು ಮುಖ್ಯಮಂತ್ರಿಗಳೊಂದಿಗೆ ಉತ್ತಮ ಸಂಬಂಧ ಹೊಂದಿತ್ತು’:ಬಿಜೆಪಿಯೇತರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳ ಬಗೆಗೆ ಮೋದಿ ಸರ್ಕಾರ ಅನುಸರಿಸುತ್ತಿರುವ ತಾರತಮ್ಯ ಧೋರಣೆಯನ್ನು ನಾನಾನಗಲೀ, ಯುಪಿಎ ಸರ್ಕಾರವಾಗಲೀ ಎಂದಿಗೂ ಅನುಸರಿಸಿಲ್ಲ. ಇದಕ್ಕೆ ಶಿವರಾಜ್ ಸಿಂಗ್ ಅವರೇ ಸಾಕ್ಷಿ. ನಮ್ಮ ಸರ್ಕಾರವು ಬೇರೆ ಪಕ್ಷದ ಮುಖ್ಯಮಂತ್ರಿಗಳೊಂದಿಗೂ ಉತ್ತಮ ಸಂಬಂಧ ಹೊಂದಿತ್ತು. ಆ ರಾಜ್ಯಕ್ಕೆ ಸಲ್ಲಬೇಕಾದ ಗೌರವವನ್ನು ನಾವು ಸಲ್ಲಿಸಿದ್ದೆವು ಎಂದು ಸ್ಪಷ್ಟಪಡಿಸಿದರು.

Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *