Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ನವಂಬರ್ 26ಕ್ಕೆ ಸಂವಿಧಾನ ದಿನವನ್ನಾಗಿ ಏಕೆ ಆಚರಿಸಲಾಗುತ್ತದೆ..?

ಭಾರತ ಸಂವಿಧಾನವು ಜಗತ್ತಿನಲ್ಲಿನ ಅತಿ ದೊಡ್ಡ ಸಂವಿಧಾನ ಎಂದು ಹೇಳಲಾಗುತ್ತದೆ. ಇದು ಸದ್ಯ 448 ವಿಧಿಗಳು 12 ಪರಿಚ್ಛೇದಗಳು 101 ತಿದ್ದುಪಡಿಗಳನ್ನು ಹೊಂದಿದೆ. ಇಂತಹ ಬೃಹತ್ ಸಂವಿಧಾನವು ಜನೆವರಿ 26 1950 ರಂದು ಇದನ್ನು ಜಾರಿಗೆ ತರಲಾಯಿತು. ಆ ದಿನವನ್ನು ಗಣರಾಜ್ಯ ದಿನ ಎಂದು ಘೋಷಿಸಲಾಯಿತು. ಅದರ ಭಾಗವಾಗಿ ಸಂವಿಧಾನದ ಪ್ರಸ್ತಾವನೆಯೂ ಒಟ್ಟು ಸಂವಿಧಾನದ ಸಾರವನ್ನು ಎತ್ತಿ ಹಿಡಿಯುತ್ತದೆ.ಸಂವಿಧಾನ ಪ್ರಸ್ತಾವನೆ:ಭಾರತದ ಪ್ರಜೆಗಳಾದ ನಾವು, ಭಾರತವನ್ನು ಒಂದು ಸಾರ್ವಭೌಮ, ಸಮಾಜವಾದಿ, ಜಾತ್ಯಾತೀತ, ಪ್ರಜಾಸತ್ತಾತ್ಮಕ ಗಣತಂತ್ರವನ್ನಾಗಿ ವಿಧಿಯುಕ್ತವಾಗಿ ಸ್ಥಾಪಿಸಿ, ಅದರ ಎಲ್ಲಾ ಪ್ರಜೆಗಳಿಗೆ,ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ;ವನ್ನುವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ ಸ್ವಾತಂತ್ರ್ಯ;ವನ್ನುಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ;ಗಳನ್ನು ದೊರಕಿಸಿ,ವೈಯಕ್ತಿಕ ಘನತೆ ಮತ್ತು ದೇಶದ ಒಗ್ಗಟ್ಟು ಮತ್ತು ಐಕ್ಯತೆಗೆ ಎಲ್ಲರಲ್ಲೂ ಭ್ರಾತೃತ್ವತೆ ಯನ್ನು ಪ್ರೋತ್ನಾಹಿಸಲು ನಿರ್ಧರಿಸಿ;ನಮ್ಮ ಸಂವಿಧಾನ ರಚನಾಸಭೆಯಲ್ಲಿ ಈ 1949 ರ ನವೆಂಬರ್ ಮಾಹೆಯ 26ನೇ ದಿನದಂದು, ನಾವಾಗಿ ನಾವೇ ಈ ಸಂವಿಧಾನವನ್ನು ಸ್ವೀಕರಿಸಿ, ಶಾಸನವನ್ನಾಗೆ ವಿಧಿಸಿಕೊಳ್ಳುತ್ತೇವೆ.”ಆದರೆ ಇದಕ್ಕೂ ಮುಂಚೆ ನವಂಬರ್ 26 ರಂದು ಸಂಸತ್ತಿನ ಶಾಸನ ಸಭೆಯಲ್ಲಿ ಅಂಬೇಡ್ಕರರು ಸಂವಿಧಾನವನ್ನು ಮಂಡಿಸಿ ಮಾತನಾಡಿದ ದಿನವನ್ನೇ ಈಗ ಸಂವಿಧಾನದ ದಿನ ಎಂದು ಆಚರಿಸಲಾಗುತ್ತಿದೆ.ಅಂಬೇಡ್ಕರರವರು ಅಂದು ನವಂಬರ್ 26ರಂದು ಶಾಸನ ಸಭೆಯಲ್ಲಿ ಮಾತನಾಡುತ್ತಾ “ಜನವರಿ 26, 1950ರಂದು ನಾವು ವೈರುಧ್ಯಗಳ ಬದುಕಿಗೆ ಕಾಲಿಡಲಿದ್ದೇವೆ.‌ ರಾಜಕೀಯದಲ್ಲಿ, ನಮಗೆ ಸಮಾನತೆಯಿರುತ್ತದೆ ಆದರೆ ಸಾಮಾಜಿಕ ಹಾಗೂ ಆರ್ಥಿಕ ಸಂರಚನೆಗಳಲ್ಲಿ ಅಸಮಾನತೆಯಿರುತ್ತದೆ; ಒಬ್ಬ ಮನುಷ್ಯ ಒಂದು ಮೌಲ್ಯ ಎಂಬ ತತ್ವವನ್ನು ನಿರಾಕರಿಸುತ್ತಲೇ ಹೋಗುತ್ತಿರುತ್ತೇವೆ. ಈ ವೈರುಧ್ಯಗಳ ಬದುಕನ್ನು ಎಷ್ಟು ದಿನ ಹೀಗೇ ಮುಂದುವರೆಸಿಕೊಂಡು ಹೋಗುತ್ತೇವೆ? ನಮ್ಮ ಸಾಮಾಜಿಕ ಮತ್ತು ಆರ್ಥಿಕ ಬದುಕಿನಲ್ಲಿ ಸಮಾನತೆಯ ನಿರಾಕರಣೆಯನ್ನು ಎಷ್ಟು ದಿನ ಹೀಗೇ ಮುಂದುವರೆಸುತ್ತೇವೆ? ಬಹಳ ಕಾಲ ಹೀಗೇ ಇದು ಮುಂದುವರೆಯಿತೆಂದರೆ ನಾವು ನಮ್ಮ ರಾಜಕೀಯ ಪ್ರಜಾಪ್ರಭುತ್ವವನ್ನೇ ತೊಂದರೆಗೆ ಸಿಲುಕಿಸುತ್ತಿದ್ದೇವೆ ಎಂದೇ ಅರ್ಥ. ನಾವು ಆದಷ್ಟು ಬೇಗನೇ ಈ ವೈರುಧ್ಯವನ್ನು ನಿವಾರಿಸಿಕೊಳ್ಳಬೇಕು. ಇಲ್ಲವಾದರೆ ಅಸಮಾನತೆಯಿಂದ ನರಳುತ್ತಿರುವವರು ಈ ಸಂವಿಧಾನ ರಚನಾ ಸಭೆಯು ಇಷ್ಟು ಶ್ರಮವಹಿಸಿ ಕಟ್ಟಿರುವ ಪ್ರಜಾಪ್ರಭುತ್ವದ ಸೌಧವನ್ನೇ ಪುಡಿಗಟ್ಟಿಬಿಡುತ್ತಾರಷ್ಟೆ” ಎನ್ನುವ ಎಚ್ಚರಿಕೆಯನ್ನು ಅಂಬೇಡ್ಕರ್ ರವರು ಶಾಸನ ಸಭೆಯ ಮುಂದೆ ಇಡುತ್ತಾರೆ.ಆದ್ದರಿಂದ ಸರ್ಕಾರವು ಈ ದಿನವನ್ನು ಸ್ಮರಣಿಯ ಗೊಳಿಸುವ ಸಲುವಾಗಿ ಭಾರತ ಸರ್ಕಾರವು 2015 ರಲ್ಲಿ ಅಂಬೇಡ್ಕರರ 125ನೇ ಜನ್ಮೊತ್ಸವದ ಆಚರಣೆಯ ಸಂಧರ್ಭದಲ್ಲಿ ನವಂಬರ್ 19 ರಂದು ತನ್ನ ಗೆಜೆಟ್ನಲ್ಲಿ ನವಂಬರ್ 26 ನ್ನು ಸಂವಿಧಾನ ದಿವಸ್ ಎಂದು ಪ್ರಕಟಣೆಯನ್ನು ಹೊರಡಿಸಿತು.ಅಂದಿನಿಂದ ಇದನ್ನು ಸಂವಿಧಾನದ ಮಹತ್ವ ಮತ್ತು ಅಂಬೇಡ್ಕರರ ವಿಚಾರಧಾರೆಗಳನ್ನು ಜನರಲ್ಲಿ ಬಿತ್ತುವ ನಿಟ್ಟಿನಲ್ಲಿ ಈ ದಿನವನ್ನು ಸರ್ಕಾರ ಅಧಿಕೃತವಾಗಿ ಆಚರಿಸುತ್ತಾ ಬರುತ್ತಿದೆ.ಇದಕ್ಕೂ ಮೊದಲು ಈ ದಿನವನ್ನು ಕಾನೂನು ದಿನ ಎಂದು ಸಹ ಆಚರಿಸಲಾಗುತಿತ್ತು.ಪ್ರಧಾನಿ ಮೋದಿಯವರು 2015 ರ ಅಂಬೇಡ್ಕರ್ ರವರ ವರ್ಷಪೂರ್ತಿ ಆಚರಣೆಗೆ ಚಾಲನೆಯನ್ನು ನೀಡಿದರು.ಈ ದಿನದಂದು ಸರ್ಕಾರವು ಪ್ರತಿ ಶಾಲಾ ಕಾಲೇಜುಗಳಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ವಿಧ್ಯಾರ್ಥಿಗಳಿಗೆ ಓದಿಸಲಾಗುತ್ತದೆ.

Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *