ನವದೆಹಲಿ: ಬೆಂಬಲ ಬೆಲೆ ನಿಗದಿ, ಸ್ವಾಮಿನಾಥನ್ ವರದಿ ಜಾರಿಗೊಳಿಸುವಂತೆ ರೈತರು ದೆಹಲಿಯಲ್ಲಿ ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಕರ್ನಾಟಕ, ಆಂಧ್ರಪ್ರದೇಶ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ತಮಿಳುನಾಡು ಮತ್ತು ಉತ್ತರ ಪ್ರದೇಶದಿಂದ ಆಗಮಿಸಿದ್ದ 1ಲಕ್ಷಕ್ಕೂ ಹೆಚ್ಚು ರೈತರು ನಮಗೆ ಅಯೋಧ್ಯೆ ಬೇಡ ರೈತರ ಸಾಲ ಮನ್ನಾ ಮಾಡಿ ಅಂತಾ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಇನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಪ್ರತಿಭಟನಾ ನಿರತ ರೈತರಿಗೆ ಬೆಂಬಲ ಸೂಚಿಸಿದ್ದಾರೆ. ನಾವು ನಿಮ್ಮೊಂದಿಗೆ ಇದ್ದೇವೆ ಅಂತಾ ರಾಹುಲ್ ರೈತರಿಗೆ ಭರವಸೆ ನೀಡಿದ್ರು. ಜಂತರ್ಮಂತರ್ನಲ್ಲಿ ರೈತರ ಪರವಾಗಿ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು. 15 ಶ್ರೀಮಂತ ಉದ್ಯಮಿಗಳ ಸುಮಾರು 3.5 ಲಕ್ಷ ಕೋಟಿ ಸಾಲಮನ್ನಾ ಮಾಡುವ ಪ್ರಧಾನಿ ಮೋದಿಜಿಗೆ ದೇಶದ ರೈತರ ಸಾಲಮನ್ನಾ ಮಾಡಲು ಯಾಕೆ ಸಾಧ್ಯವಿಲ್ಲ ಅಂತಾ ಪ್ರಶ್ನಿಸಿದ್ದಾರೆ. ರೈತರು ಮೋದಿಯಿಂದ ಫ್ರೀ ಗಿಫ್ಟ್ ಕೇಳುತ್ತಿಲ್ಲ, ಬದಲಾಗಿ ಅವರು ತಮ್ಮ ಹಕ್ಕುಗಳನ್ನು ಕೇಳುತ್ತಿದ್ದಾರೆ ಅಂತಾ ರೈತರ ಪರವಾಗಿ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ ನಡೆಸಿದ್ರು.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





