ಬೆಂಗಳೂರು: ಇದೇ ಡಿಸೆಂಬರ್ 8 ರಂದು ನಡೆಯಲಿರುವ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮುಖಿ ಅತಿಥಿಯಾಗಿ ಭಾಗವಹಿಸಲಿದ್ದಾರೆ.ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಹಾಗೂ ಡಿಸೆಂಬರ್ 10 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಶಾಸಕರ ಸಭೆಯನ್ನು ಕರೆದಿದೆ. ಆದರೆ, ಈ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಗೆ ಹೆಚ್.ಡಿ.ಕುಮಾರಸ್ವಾಮಿಯವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ.ಇದೇನಿದು? ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಜೆಡಿಎಸ್ ನಾಯಕರು ಭಾಗವಹಿಸುವುದೇ ಎಂದು ಅಚ್ಚರಿ ಆಗಬಹುದು. ಆದರೆ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸರ್ಕಾರದ ನೇತೃತ್ವ ವಹಿಸಿರುವುದರಿಂದ ಅವರನ್ನೂ ಸಭೆಗೆ ಆಹ್ವಾನಿಸಲಾಗಿದೆ. ಹಾಗೆಯೇ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಹಲವು ಭಿನ್ನಾಭಿಪ್ರಾಯಗಳು ಮುದಿರುವುದರಿಂದ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಾರಣ ನೀಡಲಿದ್ದಾರೆ. ಜೊತೆಗೆ ಚಳಿಗಾಲದ ಅಧಿವೇಶನದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದರೊಂದಿಗೆ ಕಾಂಗ್ರೆಸ್ ಶಾಸಕರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ ಎನ್ನಲಾಗಿದೆ.ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಉಪಸ್ಥಿತಿ ಅಗತ್ಯವಾಗಿರುವುದರಿಂದ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





