Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಮೋದಿಯಷ್ಟು ದುರಾಡಳಿತ ಈ ಹಿಂದಿನ ಯಾವುದೇ ಸರ್ಕಾರ ಮಾಡಿಲ್ಲ- ಎಸ್ ಆರ್ ಹಿರೇಮಠ ವಾಗ್ದಾಳಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಮುಂದಾಳತ್ವದ ಕೇಂದ್ರ ಸರ್ಕಾರ ಈ ಹಿಂದೆ ಯಾವುದೇ ಸರ್ಕಾರ ಮಾಡದ ದುರಾಡಳಿತ ಮಾಡುತ್ತಿದೆ ಎಂದು ಸಮಾಜಿಕ ಪರಿವರ್ತನಾ ಸಮಿತಿಯ ಎಸ್.ಆರ್.ಹಿರೇಮಠ ಆರೋಪಿಸಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮುಂದಾಳತ್ವದಲ್ಲಿ ಈ ಹಿಂದೆ ಯಾವ ಸರ್ಕಾರ ಮಾಡದ ದುರಾಡಳಿತ ಮಾಡುತ್ತಿದೆ. ದಲಿತರು ಹಾಗೂ ಅಲ್ಪ ಸಂಖ್ಯಾತರ ಮೇಲೆ ಆಗುತ್ತಿರುವ ದೌರ್ಜನ್ಯ ಮತ್ತು ಕೆಲವೇ ಆರಿಸಿದ ವ್ಯಕ್ತಿಗಳ ಮೇಲಿನ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದು, ಗಾಲಿ ಜನಾರ್ಧನ ರೆಡ್ಡಿ, ಎಸ್.ಎಂ.ಕೃಷ್ಣ ಅವರ ಅಳಿಯ ವ್ಹಿ.ಜಿ.ಸಿದ್ಧಾರ್ಥ ಇವರ ಮೇಲೆ ಕ್ರಮ ಜರಿಗಿಸುತ್ತಿಲ್ಲ ಎಂದರು. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸಲು ಜನ ಸಂಗ್ರಾಮ ಪರಿಷತ್ ಆಗ್ರಹಿಸುತ್ತದೆ ಎಂದು ಅವರು ತಿಳಿಸಿದರು. ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿಗಿಂತಲೂ ಮೀಗಿಲಾಗಿ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಿಷ್ಕ್ರಿಯಗೊಳಿಸುವ ಕಾರ್ಯ ಮಾಡುತ್ತಿರುವುದು ಸರಿಯಲ್ಲ ಈ ನಿಟ್ಟಿನಲ್ಲಿ ರಾಷ್ಟ್ರಪತಿಗಳು ಈ ದುರಾಡಳಿತ ನಿಯಂತ್ರಿಸಲು ಮಧ್ಯ ಪ್ರವೇಶಿಸಬೇಕು ಎಂದರು. ಕಪ್ಪುಹಣದ ವಿರುದ್ಧ ಸಮರ ಸಾರಿ ಭ್ರಷ್ಟಾಚಾರ ನಿಯಂತ್ರಿಸುವುದಾಗಿ ಹೇಳಿ ಗಾಲಿ ಜನಾರ್ದನ ರೆಡ್ಡಿ ಹಾಗೂ ವ್ಹಿ.ಜಿ.ಸಿದ್ಧಾರ್ಥ ಅವರನ್ನು ರಕ್ಷಿಸುತ್ತಿರುವುದು ಏಕೆ ಎಂದು ಪ್ರಶ್ನಿಸಿದರು. ರೈಫಲ್ ಹಗರದಿಂದ ಪ್ರಧಾನಿ ನರೇಂದ್ರ ಮೋದಿ ಉಳಿದುಕೊಳ್ಳಲು ಹುನ್ನಾರ ನಡೆಸುತ್ತಿದ್ದಾರೆ. ಸರ್ಕಾರಿ ಗೋಮಾಳ ಭೂಮಿಯನ್ನು ಭೂ ಮಾಫಿಯಾ ಪ್ರಿಸ್ಟಿಜ್ ಕಂಪನಿಗೆ ಕೊಡಲು ಮೂರು ಅಧಿಕಾರಿಗಳ ಸಹಾಯ ಮಾಡಿರುವುದು ಬೆಳಕಿಗೆ ಬಂದಿದೆ ಎಂದರು. ಈ ಕುರಿತು ಸರ್ಕಾರ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ದಿ. 15-10-2018ರಂದು ಆದೇಶ ಹೊರಡಿಸಿದೆ. ಕರ್ನಾಟಕ ಲೋಕಾಯುಕ್ತ ವಿಶ್ವನಾಥ ಶೆಟ್ಟಿ ಇವರಿಗೆ ಸರ್ಕಾರದ ಬಗ್ಗೆ ಕಾಳಜಿ ಸಂವಿಧಾನದ ಆಶಯ ಈಡೇರಿಸುವ ಕಿಂಚಿತ್ತು ಆಸಕ್ತಿ ಇದ್ದರೆ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ ತಮ್ಮ ಧೈರ್ಯ ಪ್ರದರ್ಶಿಸಲಿ ಎಂದು ಅವರು ತಿಳಿಸಿದರು.

Share News

About Shaikh BIG TV NEWS, Hubballi

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …

Leave a Reply

Your email address will not be published. Required fields are marked *