ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾರ್ಯತಂತ್ರ ರೂಪಿಸಲು ಸಂಭಾವ್ಯ ಮಹಾಘಟಬಂಧನಕ್ಕೆ ಮುಹೂರ್ತ ಸಿದ್ಧವಾಗಿದೆ. ಮಹಾಘಟಬಂಧನದ ಮೊದಲ ಸಭೆ ಇಂದು ನಡೆಯಲಿದ್ದು, ತೆಲುಗು ದೇಶಂ ಪಕ್ಷ (ಟಿಡಿಪಿ) ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಸಭೆಯ ನೇತೃತ್ವ ವಹಿಸಿದ್ದಾರೆ.ಮಧ್ಯಪ್ರದೇಶ, ಛತ್ತೀಸ್ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳನ್ನು ಘೋಷಿಸುವ ಮತ್ತು ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭದ ಒಂದು ದಿನ ಮುಂಚಿತವಾಗಿ ನಡೆಯುತ್ತಿರುವ ಈ ಸಭೆ ಬಹಳ ಪ್ರಾಮುಖ್ಯತೆಯನ್ನು ಹೊಂದಿದೆ.ಸಭೆಯ ನೇತೃತ್ವ ವಹಿಸಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು, ಬಿಜೆಪಿಯೇತರ ಪಕ್ಷಗಳ ನಾಯಕರನ್ನು ಸಭೆಗೆ ಆಹ್ವಾನಿಸಿದ್ದಾರೆ. “ಎನ್ ಡಿಎ ಮೈತ್ರಿ ಕೂಟವನ್ನು ಅಧಿಕಾರದಿಂದ ಕೆಳಗಿಳಿಸಿ ಬಿಜೆಪಿಯೇತರ ಸರ್ಕಾರ ರಚನೆ ಸಭೆಯ ಮುಖ್ಯ ಅಜೆಂಡಾ” ಆಗಿದೆ.ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಸಭೆಗೆ ಹಾಜರಾಗಲು ನಿರೀಕ್ಷಿಸಲಾಗಿದೆ. ಸಭೆಯಲ್ಲಿ, ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಬಗ್ಗೆ ಚರ್ಚಿಸುವ ನಿರೀಕ್ಷೆಯಿದೆ.ರಫೇಲ್ ಒಪ್ಪಂದ, ರೈತರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಸರ್ಕಾರದ ಮೇಲೆ ದಾಳಿ ಮಾಡಲು ರೂಪಿಸಬಹುದಾದ ತಂತ್ರಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೇ ಎಂದು ಮೂಲಗಳು ಹೇಳಿವೆ. ಬಿಜೆಪಿ ಅಲ್ಲದ ಪಕ್ಷಗಳ ಮುಖ್ಯಮಂತ್ರಿಗಳಲ್ಲದೆ, ಕೇರಳ, ಪಂಜಾಬ್ ಮತ್ತು ಪುದುಚೇರಿ ಮುಖ್ಯಮಂತ್ರಿಗಳಿಗೆ ಸಭೆಗೆ ಆಹ್ವಾನ ನೀಡಲಾಗಿದೆ.ರಾಷ್ಟ್ರವಾದಿ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಪ್ರಧಾನ ಕಾರ್ಯದರ್ಶಿ ಎಸ್.ಸುಧಕರ್ ರೆಡ್ಡಿ, ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ ಶರದ್ ಪವಾರ್, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥ ಮಮತಾ ಬ್ಯಾನರ್ಜಿ, ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಎಂ.ಕೆ. ಸ್ಟಾಲಿನ್, ಆಮ್ ಆದ್ಮಿ ಪಾರ್ಟಿ (ಎಎಪಿ) ಸಂಚಾಲಕ ಅರವಿಂದ್ ಕೇಜ್ರಿವಾಲ್, ರಾಷ್ಟ್ರೀಯ ಜನತಾ ದಳದ ನಾಯಕ (ಆರ್.ಜೆ.ಡಿ) ತೇಜಸ್ವಿಯಾದವ್ ಮತ್ತು ಡೆಮಾಕ್ರಸಿ ಜನತಾ ದಳ (ಎಲ್ಜೆಡಿ) ನಾಯಕ ಶರದ್ ಯಾದವ್ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ.ಸಮಾಜವಾದಿ ಪಕ್ಷ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಸಭೆಯಲ್ಲಿ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಆದರೆ ಅನಿವಾರ್ಯ ಕಾರಣಗಳಿಂದ ಅವರು ಬರಲು ಸಾಧ್ಯವಾಗದಿದ್ದರೆ, ಹಿರಿಯ ನಾಯಕ ರಾಮ್ ಗೋಪಾಲ್ ಯಾದವ್ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





