ನವದೆಹಲಿ: ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನ ವಿಧಾನಸಭಾ ಚುನಾವಣೆಯ ಈವರೆಗಿನ ಟ್ರೆಂಡಿಂಗ್ ನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದೆ. ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲೂ ಕಾಂಗ್ರೆಸ್ ಸರಳ ಬಹುಮತದತ್ತ ಸಾಗುತ್ತಿದೆ. ಏತನ್ಮಧ್ಯೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ನಿವಾಸಕ್ಕೆ ತೆರಳಿದ್ದಾರೆ. ಮಧ್ಯಾಹ್ನ 02:50ಕ್ಕೆ ಇಬ್ಬರೂ ಜಂಟಿ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಈವರೆಗಿನ ಟ್ರೆಂಡಿಂಗ್ ನೋಡುವುದಾದರೆ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ 109, ಬಿಜೆಪಿ 110, ಬಿಎಸ್ಪಿ 5 ಮತ್ತು ಇತರ ಪಕ್ಷಗಳು 6 ಸ್ಥಾನಗಾಲ್ಲಿ ಮುನ್ನಡೆ ಸಾಧಿಸಿದೆ.ರಾಜಸ್ಥಾನದಲ್ಲಿ ಬಿಜೆಪಿ 74, ಕಾಂಗ್ರೆಸ್ 99, ಬಿಎಸ್ಪಿ 4 ಮತ್ತು ಇತರರು 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಸರಳ ಬಹುಮತಕ್ಕೆ 100 ಸ್ಥಾನಗಳ ಅಗತ್ಯವಿದೆ.ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಗೆಲುವು ಸ್ಪಷ್ಟವಾಗಿದೆ. ಇಲ್ಲಿ ಕಾಂಗ್ರೆಸ್ 65 ಸ್ಥಾನಗಳನ್ನು, ಬಿಜೆಪಿ 18, ಅಜಿತ್ ಜೋಗಿ ಪಕ್ಷದ 6 ಮತ್ತು ಇತರರು ಒಂದು ಸ್ಥಾನ ಪಡೆದಿದ್ದಾರೆ.ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾದ ಬಳಿಕ ನಡೆಯುತ್ತಿರುವ ಮೊದಲ ದೊಡ್ಡ ಚುನಾವಣೆಯಾಗಿದ್ದು ಇದರಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ ನೀಡಿದೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





