ಮುಂಬೈ: ಸರ್ಕಾರಿ ಆಸ್ಪತ್ರೆಯಲ್ಲಿ ನಿನ್ನೆ ಬೆಂಕಿ ಅವಘಡ ಸಂಭವಿಸಿ 6 ತಿಂಗಳ ಮಗು ಸೇರಿದಂತೆ 8 ರೋಗಿಗಳು ಮೃತಪಟ್ಟಿರುವ ಘಟನೆ ಮುಂಬೈ ಹೊರವಲಯದ ಅಂಧೇರಿಯಲ್ಲಿ ನಡೆದಿದೆ.ಆಸ್ಪತ್ರೆಯಲ್ಲಿದ್ದ 140ಕ್ಕೂ ಹೆಚ್ಚು ಜನರನ್ನ ರಕ್ಷಿಸಲಾಗಿದೆ. ನಿನ್ನೆ ಸಂಜೆ 4.20ರ ಸಮಯದಲ್ಲಿ ಇಎಸ್ಐಸಿ ಕಾಮ್ಗರ್ ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಕಟ್ಟಡವನ್ನು ಆವರಿಸಿ, ಹೊಗೆಯ ತೀವ್ರತೆ ಹೆಚ್ಚಾಯಿತು ಎಂದು ತಿಳಿದುಬಂದಿದೆ. ಬೆಂಕಿ ಅವಘಡದಿಂದ ನಿನ್ನೆ 6 ಜನ ಸಾವನ್ನಪ್ಪಿದ್ದು, ಇಂದು ಬೆಳಗ್ಗೆ ಮತ್ತಿಬ್ಬರು ಮೃತಪಟ್ಟು ಸಾವಿನ ಸಂಖ್ಯೆ 8ಕ್ಕೆ ಏರಿದೆ.ಹೊಗೆ ಸಂಪೂರ್ಣ ಕಟ್ಟಡವನ್ನು ವ್ಯಾಪಿಸಿದ ಕಾರಣ ರೋಗಿಗಳು ಹೊರ ಬರಲು ಸಾಧ್ಯವಾಗಿರಲಿಲ್ಲ. ಕೆಲವರು ಟೆರೇಸ್ ಮೇಲೆ ಹೋಗಿ ತಮ್ಮ ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದರು. ಅಂಥವರನ್ನು ಅಗ್ನಿಶಾಮಕ ಸಿಬ್ಬಂದಿ ತಕ್ಷಣವೇ ರಕ್ಷಿಸಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಸುದ್ದಿ ತಿಳಿದು 10 ವಾಹನಗಳಲ್ಲಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು ಎಂದು ವಿಪತ್ತು ನಿರ್ವಹಣಾ ಘಟಕ ತಿಳಿಸಿದೆ. ಕಟ್ಟಡದಲ್ಲಿ ಇನ್ನೂ ಕೆಲವರು ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





