ವಿಷಪೂರಿತ ಆಹಾರ ಸೇವನೆ; ಒಂದೇ ಕುಟುಂಬದ ನಾಲ್ವರ ಬಲಿ, ಮೂವರು ಅಸ್ವಸ್ಥಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಹುಲಿತೊಟ್ಲು ಗ್ರಾಮದಲ್ಲಿ ನಡೆದಿರುವ ಘಟನೆ.ಚಿತ್ರದುರ್ಗ: ವಿಷಪೂರಿತ ಆಹಾರ ಸೇವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಹುಲಿತೊಟ್ಲು ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗದ ಐಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಳೆದ ರಾತ್ರಿ ಹುಲಿತೊಟ್ಲು ಗ್ರಾಮದ ಏಳು ಮಂದಿ ವಿಷಾಹಾರ ಸೇವಿಸಿದ್ದು, ಅಸ್ವಸ್ಥಗೊಂಡ ಇವರುಗಳನ್ನು ದಾವಣಗೆರೆಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೆ ಚಿತ್ತಪ್ಪ, ಶಶಿಧರ್ ,ಭಾಗ್ಯಮ್ಮ ಮತ್ತು ಶಶಿಧರ್ ಎನ್ನುವವರು ಸಾವನ್ನಪ್ಪಿದ್ದು, ಗಂಭೀರ ಸ್ಥಿತಿಯಲ್ಲಿರುವ ಮುತ್ತುರಾಜ್ (14), ಸದಾನಂದ (13)ಮತ್ತು ಅಜಯ್ ಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





