Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಪುರಿ ಲೋಕಸಭಾ ಕ್ಷೇತ್ರದಿಂದ ಮೋದಿ ಕಣಕ್ಕೆ..?

ದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಹಾಗೂ ಬಿಜೆಪಿಯನ್ನ ಸೋಲಿಸಲು ವಿರೋಧ ಪಕ್ಷಗಳು ಒಂದಾಗ್ತಿವೆ. ಅಲ್ಲದೇ ಬಿಜೆಪಿಯನ್ನ ಕಟ್ಟಿ ಹಾಕಲು ನಾನಾ ರೀತಿಯ ತಂತ್ರಗಳನ್ನು ಹೆಣೆಯುತ್ತಿವೆ. ಇತ್ತ ಕೇಸರಿ ನಾಯಕರು ಲೋಕಸಭಾ ಚುನಾವಣೆಯನ್ನ ಎದುರಿಸಲು ಸಜ್ಜಾಗ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಒಡಿಶಾದ ಪುರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರೋ ಹಿರಿಯ ನಾಯಕ ಪ್ರದೀಪ್​, ಪ್ರಧಾನಿ ಮೋದಿ ಪುರಿಯಿಂದ ಸ್ಪರ್ಧಿಸೋದು 90ರಷ್ಟು ಪಕ್ಕಾ ಅಂತಾ ಹೇಳಿದ್ದಾರೆ. ಅಂತಿಮ ನಿರ್ಧಾರವನ್ನ ಪಕ್ಷದ ಸಂಸದೀಯ ಮಂಡಳಿ ತಿಳಿಸುತ್ತೆ ಅಂತ ಹೇಳಿದ್ದಾರೆ. ಇನ್ನು ಒಡಿಶಾದ ಬಿಜೆಪಿ ನಾಯಕ ಪುರೋಹಿತ್​ ಈ ಬಗ್ಗೆ ಪ್ರತಿಕ್ರಿಯಿಸಿ, “ಮೋದಿ ಪುರಿಯಿಂದ ಸ್ಪರ್ಧಿಸೋದು ಯಾರಿಂದಾನು ತಡೆಯಲು ಸಾಧ್ಯವಿಲ್ಲ. ಪ್ರಧಾನಿ ಪುರಿಯಿಂದ ಸ್ಪರ್ಧಿಸೋದು 90% ಪಕ್ಕಾ . ನರೇಂದ್ರ ಮೋದಿ ಒಡಿಶಾದ ಜನರನ್ನ ಪ್ರೀತಿಸುತ್ತಾರೆ ಮತ್ತು ಪುರಿ ಮೇಲೆ ಅವರಿಗೆ ಒಂದು ರೀತಿ ಬಾಂಧವ್ಯವಿದೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಮೋದಿ ಪುರಿಯಿಂದ ಸ್ಪರ್ಧಿಸಲು ಇಚ್ಛಿಸಬಹುದು” ಎಂದಿದ್ದಾರೆ. 2014ರ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಡೋದರ ಮತ್ತು ವರಣಾಸಿಯಲ್ಲಿ ಸ್ಪರ್ಧಿಸಿ ಎರಡೂ ಕಡೆ ಗೆಲುವು ಸಾಧಿಸಿದ್ದಾರೆ.

Share News

About Shaikh BIG TV NEWS, Hubballi

Check Also

ಮ್ಯಾನ್ಮರ್ ಭೂಕಂಪನದಲ್ಲಿ 1700ಕ್ಕೂ ಹೆಚ್ಚು ಮಂದಿ ದುರ್ಮರಣ.!

ಸ್ಪ್ರಿಂಗ್ ರೆವಲ್ಯೂಷನ್ ಮ್ಯಾನ್ಮರ್ ಮುಸ್ಲಿಮ್ ನೆಟ್ ವರ್ಕ್ ಸಮಿತಿಯ ಸದಸ್ಯ ಕುನ್ ಕೀ ಶುಕ್ರವಾರ ಸಂಭವಿಸಿದ ಭೂಕಂಪನದಿಂದ 60 ಮಸೀದಿಗಳು …

Leave a Reply

Your email address will not be published. Required fields are marked *