ನವದೆಹಲಿ: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ತಂದೆಯೇ ಆಕಸ್ಮಿಕವಾಗಿ ಮಗನಿಗೆ ಗುಂಡು ಹಾರಿಸಿ ಕೊಂದಿರುವ ಘಟನೆ ನವದೆಹಲಿಯ ಉಸ್ಮಾನ್ಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡಿಸೆಂಬರ್ 31 ರ ತಡರಾತ್ರಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.42 ವರ್ಷದ ವ್ಯಕ್ತಿಯೋರ್ವ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಖುಷಿಯಲ್ಲಿ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸುತ್ತಿದ್ದ. ಆದರೆ ಆಕಸ್ಮಿಕವಾಗಿ ಒಂದು ಗುಂಡು ಆತನ ಜೊತೆಯಲ್ಲೇ ಸಂಭ್ರಮಿಸುತ್ತಿದ್ದ ತನ್ನ 8 ವರ್ಷದ ಮಗನ ಬಲ ಕೆನ್ನೆಗೆ ತಗುಲಿ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣ ಬಾಲಕನನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.ಇನ್ನು ಶಂಕೆಯ ಆಧಾರದ ಮೇಲೆ ಉಸ್ಮಾನ್ಪುರ ಪೊಲೀಸರು ತಂದೆಯನ್ನ ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಉತ್ತರ ಪ್ರದೇಶದ ಒಬ್ಬ ವ್ಯಕ್ತಿಯಿಂದ ಬಂದೂಕನ್ನು ತಂದಿದ್ದಾಗಿ ಒಪ್ಪಿಕೊಂಡಿದ್ದಾನೆ. ಅಲ್ಲದೇ ಸಂಭ್ರಮಾಚರಣೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದೆ. ಈ ವೇಳೆ ಆಕಸ್ಮಿಕವಾಗಿ ನನ್ನ ಮಗನಿಗೆ ಗುಂಡು ತಗುಲಿತು ಎಂದು ತಪ್ಪೊಪ್ಪಿಕೊಂಡಿದ್ದಾನೆ ಅಂತಾ ಪೊಲೀಸರು ಮಾಹಿತಿ ನೀಡಿದ್ದಾರೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





