Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಬಂಡೀಪುರ ಕಾಡಿಗೆ ಬೆಂಕಿ.. ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

ಚಾಮರಾಜನಗರ: ಬೆಂಕಿ ಜ್ವಾಲೆಯಿಂದ ಕ್ಷಣಾರ್ಧದಲ್ಲಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಪಾರಾದ ಘಟನೆ ನಡೆದಿದೆ. ಅಭಯಾರಣ್ಯದ ಸೂಕ್ಷ್ಮ ವಲಯದಲ್ಲಿ ಬರುವ ಮೇಲುಕಾಮನಹಳ್ಳಿ, ಕಾರೇಮಾಳ, ಮಗುವಿನಹಳ್ಳಿ ಕಾಲೋನಿಯ ಗುಡ್ಡಗಳಲ್ಲಿ ಬೆಂಕಿ ಕಾಣಿಸಿಕೊಂಡು 25 ಕ್ಕೂ ಹೆಚ್ಚಿನ ಎಕರೆ ಪ್ರದೇಶದ ಕಾಡು ಸುಟ್ಟು ಭಸ್ಮವಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಸ್ಥಳೀಯ ಯುವಕರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.ಮೇಲುಕಾಮನಹಳ್ಳಿ ಬಳಿ ಖಾಸಗಿ ಜಮೀನಿನಲ್ಲಿ ಹಾಕಿದ್ದ ಬೆಂಕಿಯು ಗಾಳಿಯಿಂದ ಹರಡಿ ಸುಮಾರು ಒಂದು ಕಿಲೋ ಮೀಟರ್​​ ಕಾಡು ಭಸ್ಮವಾಗಿದೆ. ಇನ್ನು, ಇದೇ ವೇಳೆ ಸಿಬ್ಬಂದಿಗಳ ಕೊರತೆ, ಬೆಂಕಿ ನಂದಿಸಲು ಅಗತ್ಯ ಸಲಕರಣೆಗಳು ಇಲ್ಲದಿರುವುದರ ಕುರಿತು ಸ್ಥಳೀಯರು ಕಿಡಿಕಾರಿದ್ದಾರೆ.ಅದೃಷ್ಟವಶಾತ್ ಅನಾಹುತವೊಂದು ತಪ್ಪಿದರೂ ಅರಣ್ಯ ಇಲಾಖೆ ನಿರ್ಲಕ್ಷ್ಯದಡಿ ಪ್ರಕರಣ ದಾಖಲಿಸಿ ತಪ್ಪಿತಸ್ಥರನ್ನು ವಿಚಾರಣೆಗೊಳಪಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:Bigtvnews

Share News

About Shaikh BIG TV NEWS, Hubballi

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *