ನವದೆಹಲಿ: ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ಭಾರೀ ತಂತ್ರಗಳನ್ನು ರೂಪಿಸುತ್ತಿದೆ. ಇದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಸೋತಿರೋ ಬಿಜೆಪಿ, ಆ ರಾಜ್ಯಗಳತ್ತ ಹೆಚ್ಚು ಗಮನ ಹರಿಸಿದೆ.ಮಧ್ಯಪ್ರದೇಶ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್, ರಾಜಸ್ಥಾನ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ, ಛತ್ತೀಸ್‌ಗಢದ ಮಾಜಿ ಸಿಎಂ ರಮಣ್ ಸಿಂಗ್ ಈ ಮೂವರು ಪವರ್‌ಫುಲ್ ನಾಯಕರನ್ನು ಬಿಜೆಪಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ಬಿಜೆಪಿಯ ಕಾರ್ಯದರ್ಶಿ ಅರುಣ್ ಸಿಂಗ್, ಟ್ವೀಟ್ ಮೂಲಕ ನೇಮಕ ಮಾಡಿರುವ ಬಗ್ಗೆ ತಿಳಿಸಿದ್ದಾರೆ. ಈ ಮೂಲಕ ಬಿಜೆಪಿ ಸಾರ್ವತ್ರಿಕ ಚುನಾವಣೆಯಲ್ಲಿ ಹಿಡಿತ ಸಾಧಿಸಲು ಕಾರ್ಯತಂತ್ರ ಹೆಣೆಯುತ್ತಿದೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





