ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ವಿರೋಧ ಪಕ್ಷಗಳ ಮಾತನಾಡುವ ಹಕ್ಕನ್ನು ಕಸಿದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಸುಶೀಲ್ ಕುಮಾರ್ ಶಿಂಧೆ ಆರೋಪಿಸಿದ್ದಾರೆ. ಜೊತೆಗೆ ಪ್ರಧಾನಿಯನ್ನ ಜರ್ಮನಿಯ ಡಿಕ್ಟೇಟರ್ ಅಡಾಲ್ಫ್ ಹಿಟ್ಲರ್ಗೆ ಹೋಲಿಸಿದ್ದಾರೆ. ಮೋದಿಯವರು ಸೋಲಾಪುರದಲ್ಲಿ ಕೇವಲ ಚುನಾವಣಾ ಭಾಷಣ ಮಾಡಿದ್ದಾರೆ. ಆದ್ರೆ ಜನರ ಸಮಸ್ಯೆಗಳ ಬಗ್ಗೆ ಮಾತನಾಡಿಲ್ಲ. ಮೋದಿ ಮಹಾರಾಷ್ಟ್ರದಲ್ಲಿ ರಸ್ತೆ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಮಾಡಿದ್ದರು. ಆದ್ರೆ ಅದನ್ನು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ನಡೆಸುವ ಹಾಗೂ ವಿರೋಧಿಸುವ ಹಕ್ಕಿದೆ. ಆದ್ರೆ ಈ ಹಕ್ಕನ್ನು ಹಿಮ್ಮೆಟ್ಟಿಸಲು ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ಪ್ರಯತ್ನಿಸಿದ್ದಾರೆ ಅಂತಾ ಆರೋಪಿಸಿದ್ರು. ಈ ವೇಳೆ ಹಲವಾರು ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರಿಂದ ಹಲ್ಲೆ ಮಾಡಿಸಿದ್ದಾರೆ ಮತ್ತು ಅವರನ್ನು ತನಿಖೆಗೆ ಒಳಪಡಿಸುವಂತೆ ಕೇಂದ್ರ ಸರ್ಕಾರವೇ ಸೂಚಿಸಿದೆ ಅಂತಾ ಶಿಂಧೆ ಆರೋಪಿಸಿದ್ದಾರೆ. ಇದು ಪ್ರಜಾಪ್ರಭುತ್ವವೇ ಅಥವಾ ಸರ್ವಾಧಿಕಾರವೇ..? ಅಂತಾ ಶಿಂಧೆ ಪ್ರಶ್ನಿಸಿದ್ದಾರೆ. ಹಿಟ್ಲರ್ ಕೂಡ ಈ ರೀತಿ ಕಾರ್ಯನಿರ್ವಹಿಸುತ್ತಿದ್ದ ಅಂತಾ ಸುಶೀಲ್ ಕುಮಾರ್ ಶಿಂಧೆ ಹೇಳಿದ್ದಾರೆ.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





