ಮೈಸೂರು, ಜನವರಿ 14: ನನ್ನ ಎಲ್ಲಾ ಕೆಲಸಗಳಿಗೆ ಮೈಸೂರು ಸ್ಫೂರ್ತಿಯಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಚಾಮರಾಜನಗರ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರವನ್ನು ಜಾ.ದಳಕ್ಕೆ ಬಿಟ್ಟುಕೊಡುವಂತೆ ಕಾಂಗ್ರೆಸ್ ಮುಖಂಡರನ್ನು ಕೇಳುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು.ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಸಾ.ರಾ.ಕನ್ವೆನ್ಷನ್ ಹಾಲ್ ನಲ್ಲಿ ಕರೆದಿದ್ದ, ಮೈಸೂರು-ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರವರಿ 25ರೊಳಗೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಆಗಲಿದೆ. ಮಾರ್ಚ್ ಕೊನೆ ಅಥವಾ ಏಪ್ರಿಲ್ ಮೊದಲನೇ ವಾರದಲ್ಲಿ ಲೋಕಸಭಾ ಚುನಾವಣೆ ನಿಗದಿಯಾಗುವ ಸಾಧ್ಯತೆ ಇದೆ ಎಂದರು.ನಗರಪಾಲಿಕೆ, ಜಿಲ್ಲಾ ಪಂಚಾಯಿತಿ, ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್, ಬಿಜೆಪಿಯ ವಿರುದ್ಧ ನಿಂತು ಸರಿಯಾಗಿ ತೀರ್ಮಾನ ಮಾಡುತ್ತೀರಿ. ಆದರೆ, ಲೋಕಸಭಾ ಚುನಾವಣೆ ಬಂದರೆ ಮನೆಯಲ್ಲಿ ಮಲಗಿಕೊಳ್ಳುತ್ತೀರಿ, ಇಲ್ಲ ಬೇರೆ ಬೇರೆ ತೀರ್ಮಾನ ಮಾಡುತ್ತೀರಿ ಏಕೆ?. ಈ ಸಾರಿ ನಾನು ರಾಜ್ಯದಲ್ಲೇ ಮೊದಲನೇ ಬಾರಿಗೆ ಇಲ್ಲಿಗೆ ಬಂದು ಮಾತನಾಡುತ್ತಿದ್ದೇನೆ.ಜೆಡಿಎಸ್ ಜೊತೆ ಸೀಟು ಹಂಚಿಕೆಯ ಜೊತೆಗೆ, ಕಾಂಗ್ರೆಸ್ಸಿಗೆ ಶುರುವಾಯ್ತು ಇನ್ನೊಂದು ತಲೆನೋವುಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಜಾ.ದಳ ಗೆಲುವು ಸಾಧಿಸಿದೆ. ಅಂತೆಯೇ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಜಾ ದಳ ಎರಡೂ ಪಕ್ಷಗಳು ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಎರಡೂ ಕ್ಷೇತ್ರಗಳಲ್ಲಿ ಸುಲಭವಾಗಿ ಭಾರಿ ಬಹುಮತದಿಂದ ಗೆಲುವು ಸಾಧಿಸಬಹುದು ಎಂದರು.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





