Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಕಾಂಗ್ರೆಸ್ ನಾಯಕರ ದಿಢೀರ್ ಉಪಹಾರ ಕೂಟ:

By: Basavaraj n y ಆಪರೇಷನ್ ಕಮಲದ ಚರ್ಚೆ ಬೆಂಗಳೂರು, ಜನವರಿ 14: ಕಾಂಗ್ರೆಸ್‌ನ ಮೂವರು ಶಾಸಕರು ಬಿಜೆಪಿ ಪಾಳಯಕ್ಕೆ ಹಾರಲು ಸಜ್ಜಾಗಿ ಮುಂಬೈಗೆ ಹಾರಿರುವ ಬೆನ್ನಲ್ಲೆ ಕಾಂಗ್ರೆಸ್ ಮುಖಂಡರು ದಿಢೀರ್ ಉಪಹಾರಕೂಟ ಆಯೋಜಿಸಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ.ಶಿವನೇ! ಚುನಾವಣಾ ಹೊಸ್ತಿಲಲ್ಲಿ ಕಾಂಗ್ರೆಸ್ ನಲ್ಲಿ ಮತ್ತೆ ಶುರುವಾಯ್ತು ಲಿಂಗಾಯತ ಜಗಳನಗರದ ಖಾಸಗಿ ಹೊಟೆಲ್‌ನಲ್ಲಿ ಕಾಂಗ್ರೆಸ್‌ನ ಎಲ್ಲ ಸಚಿವರು, ಕೆಪಿಸಿಸಿ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರು ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಉಪಹಾರಕೂಟದ ನೆಪದಲ್ಲಿ ಒಟ್ಟು ಸೇರಿ ಆಪರೇಷನ್ ಕಮಲದ ಬಗ್ಗೆ ಚರ್ಚೆ ನಡೆಸಿ ಪ್ರತಿ ತಂತ್ರದ ಕುರಿತು ಮಾತನಾಡಿದ್ದಾರೆ.ಮುಂಬೈನಲ್ಲಿ ಶಾಸಕರು, ಬಿಜೆಪಿಯಿಂದ ಆಪರೇಷನ್ ಕಮಲ : ಡಿಕೆಶಿಹೊರಗೆ ಹೆಜ್ಜೆ ಇಡಲು ಸಜ್ಜಾಗಿರುವ ಶಾಸಕರನ್ನು ಮತ್ತೆ ವಾಪಸ್ ಕರೆತರು ಗಟ್ಟಿಯಾದ ತಂಡವನ್ನು ರಚಿಸಬೇಕು ಎಂದು ಸಭೆಯಲ್ಲಿ ನಿರ್ಣಯಿಸಿದ್ದಾರೆ ಎಂದು ಗೊತ್ತಾಗಿದೆ. ಜೊತೆಗೆ ಆಪರೇಷನ್ ಕಮಕ್ಕೆಮಪ್ರತಿಯಾಗಿ ಬಿಜೆಪಿ ಶಾಸಕರನ್ನು ತಮ್ಮತ್ತ ಸಹ ಸೆಳೆಯುವ ಬಗ್ಗೆ ಸಹ ಸಭೆಯಲ್ಲಿ ಮಾತನಾಡಲಾಗಿದೆ.ಬಿಜೆಪಿ ಶಾಸಕರೆಲ್ಲಾ ದೆಹಲಿಯಲ್ಲಿದ್ದು, ಮೇಲಿಂದ ಮೇಲೆ ವಿವಿಧ ಸಭೆಗಳಲ್ಲಿ ಅವರು ಭಾಗಿ ಆಗುತ್ತಿದ್ದಾರೆ. ಇದೇ ಸಮಯದಲ್ಲಿ ಕಾಂಗ್ರೆಸ್‌ನ ಮೂರು ಶಾಸಕರು ಮುಂಬೈಗೆ ತೆರಳಿರುವುದು ಕಾಂಗ್ರೆಸ್ ಪಾಳಯದಲ್ಲಿ ಭೀತಿ ಹೆಚ್ಚಿದೆ.ಜೆಡಿಎಸ್ ಜೊತೆ ಸೀಟು ಹಂಚಿಕೆಯ ಜೊತೆಗೆ, ಕಾಂಗ್ರೆಸ್ಸಿಗೆ ಶುರುವಾಯ್ತು ಇನ್ನೊಂದು ತಲೆನೋವುಕಾಂಗ್ರೆಸ್‌ ಶಾಸಕರನ್ನು ವಾಪಸ್ ಕರೆತರುವ ಹಾಗೂ ಆಪರೇಷನ್ ಕಮಲಕ್ಕೆ ಪ್ರತಿ ತಂತ್ರವನ್ನು ಜಾರಿಮಾಡುವ ಹೊಣೆಗಾರಿಕೆಯನ್ನು ಡಿ.ಕೆ.ಶಿವಕುಮಾರ್ ಅವರಿಗೆ ನೀಡಲಾಗಿದೆ.ಇದೇ ವಿಷಯವಾಗಿ ಸುದ್ದಿಗಾರರೊಂದಿಗೆ ಮಾತನಾಡಿರುವ ಡಿ.ಕೆ.ಶಿವಕುಮಾರ್ ಅವರು, ಶಾಸಕರು ಮುಂಬೈಗೆ ಹೋಗಿದ್ದಾರೆ. ಅವರು ಯಾವ ಹೊಟೆಲ್‌ನಲ್ಲಿದ್ದಾರೆ ಎಂಬುದು ಗೊತ್ತಿದೆ. ಆಪರೇಷನ್ ಕಮಲಕ್ಕೆ ಪ್ರತಿಯಾಗಿ ಬಿಜೆಪಿ ಶಾಸಕರನ್ನು ಕರೆತರಲು ಸಹ ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

Share News

About Shaikh BIG TV NEWS, Hubballi

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *