Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ಜೆಡಿಎಸ್ ಶಾಸಕರ ಸಭೆ ಕರೆದಿಲ್ಲ: ದೇವೇಗೌಡ ಸ್ಪಷ್ಟನೆ…?

By. BASAVARAJ NYಬೆಂಗಳೂರು, ಜನವರಿ 15: ಜೆಡಿಎಸ್ ಶಾಸಕರ ಸಭೆ ಕರೆದಿಲ್ಲ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದದ್ದು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ.ದೆಹಲಿಯಲ್ಲಿರುವ 104 ಬಿಜೆಪಿ ಶಾಸಕರು ನನ್ನವರು: ಏನಿದು ಎಚ್ದಿಕೆ ಮಾತಿನ ಮರ್ಮ?ಈ ಕೂರಿತು ಟ್ವೀಟ್ ಮಾಡಿರುವ ಅವರು ಜೆಡಿಎಸ್ ಶಾಸಕರ ಸಭೆ ಕರೆಯಲಾಗಿದೆ ಎಂದು ಕೆಲ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ. ರಾಜ್ಯದ ಬಹುತೇಕ ತಾಲ್ಲೂಕುಗಳು ಬರ ಪೀಡಿತವಾಗಿದ್ದು ಈ ಸಂದರ್ಭದಲ್ಲಿ ಶಾಸಕರು ಕ್ಷೇತ್ರದಲ್ಲೇ ಇದ್ದು ಬರ ಪರಿಹಾರ ಕಾರ್ಯದಲ್ಲಿ ತೊಡಗುವಂತೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.ರಾಜ್ಯದ 156 ತಾಲ್ಲೂಕುಗಳು ಬರಪೀಡಿತವಾಗಿದ್ದು, ಈ ಸಂದರ್ಭದಲ್ಲಿ ಬಿಜೆಪಿಯು ತನ್ನ ಶಾಸಕರನ್ನು ಒಂದು ವಾರದಿಂದ ಉತ್ತರಭಾರತಕ್ಕೆ ಕಳುಹಿಸಿ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದೆ.ಸರ್ಕಾರ ಬೀಳಿಸುತ್ತೇವೆ ಎನ್ನುವ ಭ್ರಮೆಯಲ್ಲಿರುವ ಬಿಜೆಪಿಯಿಂದ ಬರ ಪೀಡಿತ ಕ್ಷೇತ್ರದ ಜನತೆಗೆ ಅನ್ಯಾಯವಾಗುತ್ತಿದೆ.ಇದಕ್ಕೆ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ.
ಗುರುಗ್ರಾಮದ ರೆಸಾರ್ಟ್‌ನಲ್ಲಿ ಬಿಜೆಪಿ ಶಾಸಕರ ವಾಸ್ತವ್ಯ, ಕಾಂಗ್ರೆಸ್‌ನ 5 ಶಾಸಕರು ನಾಪತ್ತೆ!ಜೆಡಿಎಸ್ ಶಾಸಕರ ಸಭೆ ಕರೆಯಲಾಗಿದೆ ಎಂದು ಕೆಲ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ. ರಾಜ್ಯದ ಬಹುತೇಕ ತಾಲ್ಲೂಕುಗಳು ಬರ ಪೀಡಿತವಾಗಿದ್ದು ಈ ಸಂದರ್ಭದಲ್ಲಿ ಶಾಸಕರು ಕ್ಷೇತ್ರದಲ್ಲೇ ಇದ್ದು ಬರ ಪರಿಹಾರ ಕಾರ್ಯದಲ್ಲಿ ತೊಡಗುವಂತೆ ಸೂಚನೆ ನೀಡಿರುತ್ತೇನೆ.ಕಾಂಗ್ರೆಸ್ ಹಾಗೂ ಜೆಡಿಎಸ್‌ನಲ್ಲಿ ಇತ್ತೀಚಿನ ಕೆಲ ದಿನಗಳಲ್ಲಿ ನಡೆಯುತ್ತಿರುವ ಹಲವು ಬೆಳವಣಿಗೆಗಳಿಂದಾಗಿ ಜೆಡಿಎಸ್ ಶಾಸಕರು ಪಕ್ಷ ತೊರೆಯುವ ಸಾಧ್ಯತೆಗಳಿವೆ ಹಾಗಾಗು ಜೆಡಿಎಸ್ ಶಾಸಕರ ಸಭ ಕರೆಯಲಾಗಿದೆ ಎನ್ನುವ ಮಾಹಿತಿಯು ಸುಳ್ಳು ಎಂದು ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.ಬಿಜೆಪಿ ಶಾಸಕರೆಲ್ಲರೂ ಗುರುಗ್ರಾಮದ ರೆಸಾರ್ಟ್‌ನಲ್ಲಿದ್ದು, ಐದು ಮಂದಿ ಕಾಂಗ್ರೆಸ್ ಶಾಸಕರು ನಾಪತ್ತೆಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ

Share News

About Shaikh BIG TV NEWS, Hubballi

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *