Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

ನಮ್ಮ ಶಾಸಕರಿಗೆ ಬಿಜೆಪಿಯವ್ರು 50 ಕೋಟಿ ಆಫರ್ ಕೊಟ್ಟಿದ್ದಾರೆ -ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಒಬ್ಬೊಬ್ಬ ಶಾಸಕರಿಗೆ ಬಿಜೆಪಿಯವರು ₹50 ಕೋಟಿ ಆಫರ್ ಕೊಟ್ಟಿದ್ದಾರೆ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಮ್ಮ ಶಾಸಕರಿಗೆ ಅಸಮಾಧಾನವೇ ಇಲ್ಲವಲ್ಲ.. ಎಲ್ಲಿಯಾದ್ರೂ ಪಕ್ಷ ಬಿಟ್ಟಿದ್ದೀವಿ ಅಂತ ಹೇಳಿದ್ದಾರಾ..? ಯಾರಾದ್ರೂ‌ ಬೇರೆ ಪಾರ್ಟಿಗೆ ಹೋಗಿದ್ದೇವೆ ಅಂತ ಹೇಳಿದ್ದಾರಾ..? ನಮ್ಮ ಯಾವ ಅತೃಪ್ತ ಶಾಸಕರೂ ಕೂಡಾ ರಾಜೀನಾಮೆ ಕೊಡುವುದಿಲ್ಲ ಅಂತಾ ಸ್ಪಷ್ಟಪಡಿಸಿದರು.
ನನಗೂ ಮೈಸೂರಿನಿಂದ ಸ್ಪರ್ಧಿಸಿ ಅಂತಾ ಹೇಳ್ತಿದ್ದಾರೆ..!ಇದೇ ವೇಳೆ, ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಜೊತೆ ಒಟ್ಟಿಗೆ ಹೋಗ್ತೇವೆ. ಆದರೆ, ಇನ್ನೂ ಸೀಟು ಹಂಚಿಕೆ ಬಗ್ಗೆ ಚರ್ಚೆಯಾಗಿಲ್ಲ ಅಂತಾ ಹೇಳಿದರು. ಅಲ್ಲದೇ, ಅಂಬರೀಶ್ ಕಾಂಗ್ರೆಸ್​ನಲ್ಲಿದ್ದರು. ಸುಮಲತಾ ಅವರು ಆಗ ಚುನಾವಣಾ ಪ್ರಚಾರ ಮಾಡಿದ್ದರು. ಇದೀಗ ಸುಮಲತಾ ಸ್ಪರ್ಧಿಸುವಂತೆ ಕಾರ್ಯಕರ್ತರು ಒತ್ತಡ ಹಾಕುತ್ತಿದ್ದಾರೆ. ಜೊತೆಗೆ ನನಗೂ ಮೈಸೂರಿನಿಂದ ಸ್ಪರ್ಧಿಸಿ ಅಂತಾ ಹೇಳ್ತಿದ್ದಾರೆ. ಆದರೆ, ನಾನು ಯಾವುದೇ ಕಾರಣಕ್ಕೂ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನಾನು ರಾಜ್ಯ ರಾಜಕಾರಣದಲ್ಲೇ ಇರಲು ತೀರ್ಮಾನಿಸಿದ್ದೇನೆ ಅಂತಾ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

Share News

About Shaikh BIG TV NEWS, Hubballi

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *