ಹುಬ್ಬಳ್ಳಿ: ಕುಡಿಯುವ ನೀರಿನ ಸಮಸ್ಯೆ ಹಾಗೂ ವಾಟರ್ ಪೈಪಲೈನ್ ವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ನಗರದ ವಾರ್ಡ್ ನಂ.48ರಲ್ಲಿ ಬರುವ ಚೇತನ ಕಾಲೋನಿಯ ಜನರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.
ಸುಮಾರು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸಿದ್ದರೂ ಕೂಡ ಮಹಾನಗರ ಪಾಲಿಕೆ ಹಾಗೂ ಜಲಮಂಡಳಿಯವರು ಇತ್ತ ಗಮನ ಹರಿಸುತ್ತಿಲ್ಲ ಈ ಕುರಿತು ಹಲವಾರು ಬಾರಿ ಮನವಿ ಸಲ್ಲಿಸಿದರು ಕೂಡ ಅಧಿಕಾರಿಗಳು ಯಾವುದೇ ಕ್ರಮ ಜಾರಿ ಮಾಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸ್ಥಳಕ್ಕೆ ಬೇಟಿ ನೀಡಿದ ಮಹಾನಗರ ಪಾಲಿಕೆ ಸದಸ್ಯೆ ಸುವರ್ಣ ಕಣಕುಂಟ್ಲ, ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಹಾಗೂ ಪೈಪಲೈನ್ ವ್ಯವಸ್ಥೆ ಸರಿಪಡಿಸಲು ತಿಳಿಸಿಲಾಗಿತ್ತು ಆದರೇ ಅವರು ಇಂದು ಬರುತ್ತೇವೆ ನಾಳೆ ಬರುತ್ತೇವೆ ಎಂದು ಹರಿಕೆ ಉತ್ತರ ನೀಡುತ್ತಿದ್ದಾರೆ ಎಂದರು.ಶೀಘ್ರವಾಗಿ ಕ್ರಮ ಜಾರಿಗೊಳಿಸಲು ಮತ್ತೊಮ್ಮೆ ತಿಳಿಸಲಾಗುವುದು ಎಂದರು.ಸುಮಾರು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ವೃದ್ಧಿಸುತ್ತಿದ್ದು, 8 ದಿನಗಳಿಗೊಮ್ಮೆ ನೀರು ಸರಬರಾಜು ಆಗುತ್ತಿರುವುದರಿಂದ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ ಶೀಘ್ರವೇ ಸೂಕ್ತ ಕ್ರಮ ಜಾರಿಗೊಳಿಸದೇ ಇದ್ದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73
bigtvnews | Hubli Dharwad News | Kannada News | Karnataka News Hubli News | News In Hubli | Local news





