Warning: Trying to access array offset on value of type bool in /home/eamphica/public_html/wp-content/themes/sahifa/framework/functions/theme-functions.php on line 626
Breaking News

Warning: Attempt to read property "post_excerpt" on null in /home/eamphica/public_html/wp-content/themes/sahifa/framework/parts/post-head.php on line 73

12 ರಂದು ಬೆಂಗಳೂರು ಚಲೋ ಧರಣಿ ಸತ್ಯಾಗ್ರಹ

ಹುಬ್ಬಳ್ಳಿ: ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಧಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಕರ್ನಾಟಕ ಗ್ರಾಮೀಣ ಪ್ರೌಢಶಾಲಾ ಶಿಕ್ಷಕರ ಸಂಘಗಳು ಜಂಟಿಯಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಯನ್ನು ಕೂಡಲೇ ಪ್ರಾರಂಭಿಸಬೇಕು ಎಂಬ ಬೇಡಿಕೆಯನ್ನು ಇಟ್ಟುಕೊಂಡು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇದೇ 1 2ರಂದು ಬೆಂಗಳೂರು ಚಲೋ ಧರಣಿ ಸತ್ಯಾಗ್ರಹವನ್ನು ನಡೆಸಲಾಗುವುದು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಅಶೋಕ ಸರ್ಜನ ಅವರು ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1,96,000 ಶಿಕ್ಷಕರ ಪೈಕಿ 1,41,000 ಗ್ರಾಮೀಣ ಶಿಕ್ಷಕರು ಇದ್ದಾರೆ. ಇವರೆಲ್ಲರೂ ಹಲವು ವರ್ಷಗಳಿಂದ ಸೌಲಭ್ಯ ವಂಚಿತರಾಗಿದ್ದಾರೆ. ಸತತ ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಮುಂದೂಡುತ್ತಾ ಬರಲಾಗುತ್ತಿದೆ. ಸರ್ಕಾರ ವರ್ಗಾವಣೆಯ ವಿಷಯದಲ್ಲಿ ಮೀನಾಮೇಷ ಎಣಿಸುತ್ತಿದೆ. ನಾಲ್ಕನೇ ವೇತನ ಅಯೋಗದಲ್ಲಿದ್ದಂತಹ ಗ್ರಾಮೀಣ ಶಿಕ್ಷಕರಿಗೆ ನೀಡಲಾಗುವ ಭತ್ಯೆಯನ್ನೂ ಸಹ ನಿಲ್ಲಿಸಲಾಗಿದೆ. ಈ ದಿಸೆಯಲ್ಲಿ ಸರ್ಕಾರ ಈ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆಯನ್ನು ಆಯೋಜಿಸಲಾಗಿದೆ ಎಂದರು.ಇದರೊಂದಿಗೆ ಪದವೀಧರ ಶಿಕ್ಷಕರನ್ನು ಪಿ.ಎಸ್.ಟಿ. ಯಿಂದ ಎ.ಜಿ.ಟಿ.ಗೆ ಪರಿಗಣಿಸಬೇಕು. ಕಪ್ಪು ಹಲಗೆಯನ್ನು ರದ್ದುಪಡಿಸಿ ಬಿಳಿ ಹಲಗೆಯನ್ನು ಜಾರಿಗೊಳಿಸಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನದ ಹಕ್ಕನ್ನು ನೀಡಬೇಕು ಎಂಬ ವಿವಿಧ ಬೇಡಿಕೆಯನ್ನು ಸಹ ಸರ್ಕಾರದ ಮುಂದೆ ಇಡಲಾಗಿದೆ. ಸರ್ಕಾರ ನಮ್ಮ ಕೋರಿಕೆಗೆ ಸ್ಪಂದಿಸದೇ ಇದ್ದರೆ ಅಮರಣಾಂತ ಹೋರಾಟ, ಸತ್ಯಾಗ್ರಹ ಮಾಡಲಾಗುವುದು. ಪ್ರತಿಭಟನೆಯಲ್ಲಿ ಸುಮಾರು 20,000 ಶಿಕ್ಷಕರು ಭಾಗವಹಿಸುವ ನಿರೀಕ್ಷೆ ಇದೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದರು. ಪತ್ರಿಕಾಗೋಷ್ಠಿಯಲ್ಲಿ ಕೋಶಾಧ್ಯಕ್ಷರಾದ ಸೋಮನಗೌಡ ಪಾಟೀಲ, ರಾಜ್ಯ ಅಧ್ಯಕ್ಷರಾದ ಗೋವಿಂದ ಜುಜಾರೆ, ಸಂಘಟನಾ ಕಾರ್ಯದರ್ಶಿ ರಾಜಶ್ರೀ, ಕಾರ್ಯಾಧ್ಯಕ್ಷ ಶರಣಪ್ಪಗೌಡ ಸೇರಿದಂತೆ ಇತರರು ಇದ್ದರು.

Share News

About Shaikh BIG TV NEWS, Hubballi

Check Also

ಹಳೇಹುಬ್ಬಳ್ಳಿಯಲ್ಲಿ ಮನೆಗಳ್ಳರಿಗೆ ಖಾಕಿ ಶಾಕ್..! ಇಬ್ಬರು ಅರೆಸ್ಟ್, ₹3.45 ಲಕ್ಷದ ಚಿನ್ನಾಭರಣ ವಶ…

ಹಳೇಹುಬ್ಬಳ್ಳಿಯಲ್ಲಿ ಮನೆಗಳ್ಳರಿಗೆ ಖಾಕಿ ಶಾಕ್..! ಇಬ್ಬರು ಆರೋಪಿಗಳ ಬಂಧನ, ₹3.45 ಲಕ್ಷ ಮೌಲ್ಯದ ಚಿನ್ನಾಭರಣ ವಶ! ಹುಬ್ಬಳ್ಳಿ: ಮನೆಗೆ ಬೀಗ …

Leave a Reply

Your email address will not be published. Required fields are marked *